Breaking
Mon. Dec 23rd, 2024

ಲೋಕಸಭೆ ಚುನಾವಣೆಯ ಮತ ಎಣಿಕೆ INDIA ಬಣ ಮತ್ತು  NDA ಒಕ್ಕೂಟದ ಮಧ್ಯೆ ಈ ಬಾರಿ ತೀವ್ರ ಪೈಪೋಟಿ

ನವದೆಹಲಿ : ಲೋಕಸಭೆ ಚುನಾವಣೆಯ ಮತ ಎಣಿಕೆ  ಮಂಗಳವಾರ  ನಡೆಯಲಿದ್ದು, ಈ ಬಾರಿ ಯಾವ ಪಕ್ಷಕ್ಕೆ ಬಹುಮತ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. INDIA ಬಣ ಮತ್ತು  NDA ಒಕ್ಕೂಟದ ಮಧ್ಯೆ ಈ ಬಾರಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಈ ಬಾರಿ ಬಿಜೆಪಿಗೆ ಅಧಿಕಾರ ಸಿಗಲು ಬಿಡಬಾರದು ಎಂದು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಒಂದಾಗಿ  I.N.D.I.A ಬಣವನ್ನು ರಚಿಸಿದ್ದವು. ಆದರೆ, ವಿಪಕ್ಷಗಳ ಒಗ್ಗಟ್ಟಿನ ಹೋರಾಟದ ನಡುವೆಯೂ ಬಿಜೆಪಿ ನೇತೃತ್ವದ ಎನ್ಡಿಎ ಮತ್ತೊಮ್ಮೆ ಸರ್ಕಾರ ರಚಿಸಿ, ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನ ಮಂತ್ರಿಯಾಗುವುದು ಖಚಿತವಾಗಿದೆ.
ಈಗಾಗಲೇ ಎಕ್ಸಿಟ್ ಪೋಲ್ ಸಮೀಕ್ಷೆಗಳು ಎನ್ಡಿಎ ಭಾರೀ ಬಹುಮತದಿಂದ ಅಧಿಕಾರಕ್ಕೇರಲಿದೆ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ. ಲೋಕಸಭೆ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆಯಲಿದೆ. ಚುನಾವಣಾ ಆಯೋಗದ (EC) ಪ್ರಕಾರ, ಎಲ್ಲ 7 ಹಂತಗಳಿಗೆ ಮತದಾನವು ಬೆಳಿಗ್ಗೆ 8ರಿಂದ ಪ್ರಾರಂಭವಾಗಲಿದೆ.
ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಮೊದಲು ಅಂಚೆ ಮತಗಳ ಎಣಿಕೆ ಪ್ರಾರಂಭವಾಗಲಿದೆ. ಅಂಚೆ ಮತ ಎಣಿಕೆ ಆರಂಭವಾದ ಅರ್ಧ ಗಂಟೆಯ ನಂತರ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾದ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ತಿಳಿಸಿದ್ದಾರೆ. ಮೊದಲು ಅಂಚೆ ಮತ ಎಣಿಕೆ ಆರಂಭಿಸಬೇಕು ಮತ್ತು ಅಂಚೆ ಮತಪತ್ರಗಳ ಫಲಿತಾಂಶವನ್ನು ಮೊದಲು ಪ್ರಕಟಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ನಿಯೋಗ ಭಾನುವಾರ ಆಯೋಗವನ್ನು ಭೇಟಿ ಮಾಡಿತ್ತು.
ಲೋಕಸಭೆಯ ಎಲ್ಲಾ 543 ಸದಸ್ಯರನ್ನು ಆಯ್ಕೆ ಮಾಡಲು 7 ಹಂತಗಳಲ್ಲಿ ಏಪ್ರಿಲ್ 19ರಿಂದ ಜೂನ್ 1ರವರೆಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಯಿತು. ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎಣಿಕೆಯ ಫಲಿತಾಂಶಗಳು ECI ವೆಬ್‌ಸೈಟ್‌ನಲ್ಲಿ results.eci.gov.in ಮತ್ತು ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮತದಾರರ ಸಹಾಯವಾಣಿ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬಹುದು. ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಿಂದ ಕ್ಷೇತ್ರವಾರು ಅಥವಾ ರಾಜ್ಯವಾರು ಫಲಿತಾಂಶಗಳ ಜೊತೆಗೆ ವಿಜೇತ ಅಥವಾ ಮುಂಚೂಣಿಯಲ್ಲಿರುವ ಅಥವಾ ಹಿಂದುಳಿದ ಅಭ್ಯರ್ಥಿಗಳ ವಿವರಗಳನ್ನು ಕಂಡುಹಿಡಿಯಲು ಬಳಕೆದಾರರು ಲಭ್ಯವಿರುವ ಫಿಲ್ಟರ್ ಅನ್ನು ಬಳಸಬಹುದು. 
ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ 2019ರಲ್ಲಿ 352 ಸ್ಥಾನಗಳನ್ನು ಗಳಿಸಿದ ದಾಖಲೆಗಿಂತ ತನ್ನ ಸಾಧನೆಯನ್ನು ಸುಧಾರಿಸಲು ಸಜ್ಜಾಗಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬಿಜೆಪಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎನ್ನಲಾಗಿದೆ.

Related Post

Leave a Reply

Your email address will not be published. Required fields are marked *