Breaking
Tue. Dec 24th, 2024

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 20, ಕಾಂಗ್ರೆಸ್ಗೆ 5 ಸ್ಥಾನ ಮುನ್ನಡೆ…!

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲ ಬಿಜೆಪಿಗೆ 20, ಕಾಂಗ್ರೆಸ್ಗೆ 5 ಸ್ಥಾನ : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-20, ಕಾಂಗ್ರೆಸ್-5 ಮತ್ತು ಜೆಡಿಎಸ್ -3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಮುನ್ನಡೆ : ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ- 92,840 ಸೌಮ್ಯ ರೆಡ್ಡಿ- 38,914 ಬಿಜೆಪಿ ಮುನ್ನಡೆ- 53,926
ದಕ್ಷಿಣ ಕನ್ನಡದಲ್ಲಿ ಮೂರನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆ : ದಕ್ಷಿಣ ಕನ್ನಡದಲ್ಲಿ ಮೂರನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ – 1,33,896 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ – 1,11,312 ಅಂತರ – 22,584 ನೋಟಾ – 4,549
ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ಗೆ ಮುನ್ನಡೆ : ಬೆಂಗಳೂರು ಕೇಂದ್ರದಲ್ಲಿ ಪರಿಸ್ಥಿತಿ ಬದಲಾಗಿದ್ದು ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 90,699 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 92,807 ಮತಗಳನ್ನು ಪಡೆದಿದ್ದು 2,108 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಚಿತ್ರದುರ್ಗದಲ್ಲಿ 6ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ ಬಿಜೆಪಿ : ಚಿತ್ರದುರ್ಗದಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ 18945 ಮತಗಳ ಮುನ್ನಡೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ -2,05,643 ಮತ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಗೆ 1,86,698 ಮತ
ಒಂಬತ್ತನೇ ಸುತ್ತಲ್ಲೂ ಮುನ್ನಡೆ ಸಾಧಿಸಿದ ಡಾ.ಮಂಜುನಾಥ್  : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಒಂಭತ್ತನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಮುನ್ನಡೆ ಸಾಧಿಸಿದೆ. ಡಾ.‌ಸಿ.ಎನ್. ಮಂಜುನಾಥ್ 58,560‌ ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಬಿಜೆಪಿ-ಡಾ.ಸಿ.ಎನ್. ಮಂಜುನಾಥ್ -1,80,959. ಕಾಂಗ್ರೆಸ್-ಡಿ.ಕೆ. ಸುರೇಶ್ 1,22,399. ಬಿಜೆಪಿ ಮತಗಳ ಮುನ್ನಡೆ 58,560
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ಗೆ 1,64,337 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕೊಪ್ಪಳ ಕ್ಷೇತ್ರದಲ್ಲಿ 2ನೇ ಹಂತದಲ್ಲಿ ಕಾಂಗ್ರೆಸ್ಗೆ ಮುನ್ನಡೆ : ಕೊಪ್ಪಳ ಕ್ಷೇತ್ರದಲ್ಲಿ 2ನೇ ಹಂತದಲ್ಲಿ ಕಾಂಗ್ರೆಸ್ಗೆ ಮುನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಎರಡನೇ ಹಂತದಲ್ಲಿ 2 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಕೆ.ಬಸವರಾಜ್ಗೆ ಹಿನ್ನಡೆಯಾಗಿದೆ.
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ : ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು 8,624 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೆಗೌಡ ಅವರು 7,474 ಮತಗಳನ್ನು ಪಡೆದಿದ್ದಾರೆ.
ಬೆಂಗಳೂರು ಉತ್ತರ ಶೋಭ ಕರಂದ್ಲಾಜೆ ಮುನ್ನಡೆ : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಮುನ್ನಡೆ ಸಾಧಿಸಿದ್ದಾರೆ. ಶೋಭ ಕರಂದ್ಲಾಜೆ 13,538 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ 6521 ಮತ ಪಡೆದಿದ್ದು ಶೋಭ ಕರಂದ್ಲಾಜೆ 7007 ಮತಗಳ ಅಂತರ ಕಾಯ್ದಿರಿಸಿದ್ದಾರೆ.
ಬಳ್ಳಾರಿ, ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ : ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮುನ್ನಡೆಗಳಿಸಿದ್ದಾರೆ. ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆಯಾಗಿದೆ. ಡಾ.ಉಮೇಶ್ ಜಾಧವ್ಗೆ 1110 ಮತಗಳ ಮುನ್ನಡೆಯಾಗಿದೆ.
ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರಗೆ ಮುನ್ನಡೆ : ಶಿವಮೊಗ್ಗದಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ 15 ಸಾವಿರ ಮತಗಳ‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

 

Related Post

Leave a Reply

Your email address will not be published. Required fields are marked *