ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಗೆಲುವು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ.
ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು : ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು.
ಎರಡು ದಶಕಗಳ ಬಳಿಕ ಹಾಸನ ಗೆದ್ದ ಕಾಂಗ್ರೆಸ್, ಶ್ರೇಯಸ್ ಪಟೇಲ್ಗೆ ಗೆಲುವು : ಹಾಸನದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಎರಡು ದಶಕಗಳ ಬಳಿಕ ಕಾಂಗ್ರೆಸ್ ಸಂಸತ್ ಸ್ಥಾನ ಗೆದ್ದಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿಸುವ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆದ್ದು ಬೀಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಿದ್ದಾರೆ. 1999 ರಲ್ಲಿ ದೇವೇಗೌಡರನ್ನು ಸೋಲಿಸಿದ ಪುಟ್ಟಸ್ವಾಮಿಗೌಡರ ಮೊಮ್ಮಗನಿಂದ ದೇವೇಗೌಡರ ಮೊಮ್ಮಗನಿಗೆ ಸೋಲು.
ಮಂಡ್ಯ ಕ್ಷೇತ್ರದಲ್ಲಿ ಹೆಚ್ಡಿಕೆ ಭಾರಿ ಮುನ್ನಡೆ : ಮಂಡ್ಯ ಕ್ಷೇತ್ರದಲ್ಲಿ ಹೆಚ್ಡಿ ಕುಮಾರಸ್ವಾಮಿಗೆ ಭಾರಿ ಮುನ್ನಡೆಯಾಗಿದೆ. ಹೆಚ್.ಡಿ.ಕುಮಾರಸ್ವಾಮಿ -6,026,85 ಮತ ಪಡೆದಿದ್ದಾರೆ. ಸ್ಟಾರ್ ಚಂದ್ರು 3,81,158 ಮತ ಪಡೆದಿದ್ದು ಹೆಚ್.ಡಿ.ಕುಮಾರಸ್ವಾಮಿ 2,21,527 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಅರಳಿದ ಕಮಲ, ಕಾಗೇರಿಗೆ ಗೆಲುವು : ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಗೇರಿ 2,33,205 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿ ಬಳಿ ಸಂಭ್ರಮಾಚರಣೆ : ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿ ಬಳಿ ಸಂಭ್ರಮಾಚರಣೆ. ಸಿಹಿ ಹಂಚಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದು ಡಾ.ಸಿ.ಎನ್.ಮಂಜುನಾಥ್, ಕುಮಾರಸ್ವಾಮಿ ಪರ ಘೋಷಣೆ ಕೂಗಿದ್ದಾರೆ.
ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಭರ್ಜರಿ ಗೆಲುವು : ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ. 45,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು.
ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನತ್ತ : ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ 63,008 ಮತಗಳ ಅಂತರ ಕಾಯ್ದುಕೊಂಡಿದ್ದು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯ. 13ನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ – 4,02,905 ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ -2,78,929 ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ – 15,626 ಬಿಜೆಪಿ ಮುನ್ನಡೆ – 1,23,976
1 ಲಕ್ಷ ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಮುನ್ನಡೆ : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ – 3,72,422. ಕಾಂಗ್ರೆಸ್ನ ರಾಜೀವ್ ಗೌಡ -2,65,915 ಮತಗಳನ್ನು ಪಡೆದಿದ್ದು ಬಿಜೆಪಿ 1,06,507 ಮತಗಳ ಮುನ್ನಡೆ ಸಾಧಿಸಿದೆ.
ಶ್ರೀರಾಮುಲುಗೆ ಭಾರೀ ಹಿನ್ನಡೆ : ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಭಾರೀ ಹಿನ್ನಡೆ. 10ನೇ ಸುತ್ತಿನಲ್ಲೂ ಶ್ರೀರಾಮುಲುಗೆ ಹಿನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ – 5,24,034, ಬಿಜೆಪಿ – 4,45,908
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ : ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. 7ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 2,96,706 ಮತ ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ಪೂಜಾರಿ 2,28,310 ಮತ ಪಡೆದಿದ್ದಾರೆ.
ಜನರ ಆರ್ಶೀವಾದದಿಂದ ಈ ಬಾರಿ ಕೂಡ ಗೆಲುವಾಗ್ತಿದೆ -ತೇಜಸ್ವಿ ಸೂರ್ಯ : ದಕ್ಷಿಣ ಕ್ಷೇತ್ರದ ಜನರ ಆರ್ಶೀವಾದದಿಂದ ಈ ಬಾರಿ ಕೂಡ ಗೆಲುವಾಗ್ತಿದೆ. ತೇಜಸ್ವಿ ಸೂರ್ಯ ಮತ್ತೆ ಸಂಸದ ಆಗಬೇಕು ಅಂತಾ ಆರ್ಶೀವಾದ ಮಾಡಿದ್ದಾರೆ. ನನ್ನ ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸ್ತೀನೆ. ಮೊದಲಬಾರಿ ಗೆದ್ದಾಗ ಒಂದು ಲೆಟರ್ ಹೆಡ್ ಮಾಡೋದಕ್ಕೂ ಬರ್ತಿರಲಿಲ್ಲ. ಈ 5 ವರ್ಷ ಸಾಕಷ್ಟು ಕಲಿತಿದ್ದೇನೆ. ಇಡೀ ರಾಜ್ಯದ ಮತದಾರರು ಬಿಜೆಪಿ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದಾರೆ. 290 ಕ್ಷೇತ್ರದಲ್ಲಿ ಅಂತರದ ಡಿಫ್ರೆನ್ಸ್ ಇದೆ. ಇನ್ನೆರಡು ಗಂಟೆಯಲ್ಲಿ ಕ್ಲಿಯರ್ ಪಿಚ್ಚರ್ ಸಿಗುತ್ತೆ. ಪ್ರಧಾನಿ ಮೋದಿಯವರು ಮತ್ತೆ ಪ್ರಧಾನಿಯಾಗ್ತಾರೆ. ಹತ್ತು ವರ್ಷ ಹೇಗಿದ್ರೋ ಹಾಗೇ ಮುಂದುವರಿಸುತ್ತಾರೆ. ಒಂದು ವರ್ಷದ ಹಿಂದೆ ಸರ್ಕಾರ ಅಧಿಕಾರಕ್ಕೆ ಬಂದ್ರು ಕಾಂಗ್ರೆಸ್ ಕುಗ್ಗಿದೆ. ಒಂದೇ ವರ್ಷದಲ್ಲಿ ಜನಪ್ರಿಯತೆ ಕುಗ್ಗಿರೋದು ಅವರ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ತೇಜಸ್ವಿ ಸೂರ್ಯ ತಿಳಿಸಿದರು.
ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ : ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮತ ಕೇಂದ್ರದಿಂದ ಹೊರಗೆ ತೆರಳಿದ್ದಾರೆ. ನಿರಂತರ 6 ಸುತ್ತುಗಳಲ್ಲಿ ಜಗದೀಶ್ ಶೆಟ್ಟರ್ಗೆ ಮುನ್ನಡೆಯಾಗಿದೆ.