ಕರ್ನಾಟಕ ಲೋಕಸಭಾ ಚುನಾವಣೆ 2024 ಫಲಿತಾಂಶ ಲೈವ್: ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಲಿದ್ದಾರೆ? ಯಾರಿಗೆ ಎಷ್ಟು ಸ್ಥಾನ ಸಿಕ್ಕಿದೆ. ಎಷ್ಟು ಲೀಡ್ ಹೀಗೆ ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕೋಟ ಶ್ರೀನಿವಾಸ್ ಪೂಜಾರಿಗೆ ಒಂದು ಲಕ್ಷ ಮತಗಳ ಮುನ್ನಡೆ.
ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ : ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮತ ಕೇಂದ್ರದಿಂದ ಹೊರಗೆ ತೆರಳಿದ್ದಾರೆ. ನಿರಂತರ 6 ಸುತ್ತುಗಳಲ್ಲಿ ಜಗದೀಶ್ ಶೆಟ್ಟರ್ ಗೆ ಮುನ್ನಡೆಯಾಗಿದೆ.
ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಮುನ್ನಡೆ : ಚಿಕ್ಕೋಡಿಯಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 47880 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಪ್ರಿಯಾಂಕಾ ಜಾರಕಿಹೊಳಿ : 277513 ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ : 229633 ಒಟ್ಟು 22 ಸುತ್ತುಗಳು 14 ಸುತ್ತುಗಳ ಮತ ಎಣಿಕೆ ಬಾಕಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಮುನ್ನಡೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಮುನ್ನಡೆ. 4ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ. ಬ್ರಿಜೇಶ್ ಚೌಟಗೆ 22 ಸಾವಿರ ಮತಗಳ ಮುನ್ನಡೆ. ಕಾಂಗ್ರೆಸ್‌ನ ಪದ್ಮರಾಜ್ ಪೂಜಾರಿಗೆ ಹಿನ್ನಡೆ.
ಹೆಚ್.ಡಿ.ಕುಮಾರಸ್ವಾಮಿಗೆ 1,04,000 ಮತಗಳ ಮುನ್ನಡೆ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭಾರೀ ಮುನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ -2,42,805 ಮತಗಳ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು- 1,43,694 ಮತಗಳು ಹೆಚ್ಡಿ ಕುಮಾರಸ್ವಾಮಿ 99,121 ಮತಗಳ ಮುನ್ನಡೆ
ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಮುನ್ನಡೆ : ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ- 92,840 ಸೌಮ್ಯ ರೆಡ್ಡಿ- 38,914 ಬಿಜೆಪಿ ಮುನ್ನಡೆ- 53,926