ಲೋಕಸಭಾ ಚುನಾವಣೆ 2024 ರ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಆಡಿರುವ ಮಾತು ಈಗ ಅವರಿಗೆ ಮುಳುವಾಗಿದೆ. ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಒಂದು ಮತ ಹೆಚ್ಚಿಗೆ ಪಡೆದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದ್ದರು.
ಜೂನ್ 4ರಂದು ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ 8,22,619 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,63,460 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಸುಧಾಕರ್ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಬೆಂಬಲಿಗರು ಪ್ರದೀಪ್ ಈಶ್ವರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮಂಗಳವಾರ ರಾತ್ರಿ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಸುಧಾಕರ್ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಬೆಂಬಲಿಗರು ಪ್ರದೀಪ್ ಈಶ್ವರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮಂಗಳವಾರ ರಾತ್ರಿ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.
ರಾಜೀನಾಮೆ ಪತ್ರ ವೈರಲ್ ಈಗ ಸಾಮಾಜಿಕ ಮಾಧ್ಯಮದಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ವೈರಲ್ ಆಗಿದೆ. ಪ್ರದೀಪ್ ಈಶ್ವರ್ ಲೆಟರ್ ಹೆಡ್‌ನಲ್ಲಿ ಈ ರಾಜೀನಾಮೆ ಪತ್ರವನ್ನು ಟೈಪ್ ಮಾಡಲಾಗಿದ್ದು, ಸಾಮಾಜಿಕ ಮಾಧ್ಯಮಗಲ್ಲಿ ಹಂಚಿಕೊಳ್ಳಲಾಗಿದೆ.
ರಾಜೀನಾಮೆ ಪತ್ರದಲ್ಲಿ ಏನಿದೆ? “ಬಾಲ್ಯದಿಂದಲೇ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು,”ಕೊಟ್ಟ ಮಾತು – ಇಟ್ಟ ಹೆಜ್ಜೆ ತಪ್ಪಬಾರದು” ಅನ್ನೋ ಮಾತನ್ನು ಪಾಲಿಸುತ್ತಾ ಬಂದವನು ನಾನು. ನಾನು ಕೆಲವು ದಿನಗಳ ಹಿಂದೆ ಮಾಜಿ ಸಚಿವರಾದ ಡಾ. ಕೆ.ಸುಧಾಕರ್ ಅವರು ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ. ಸುಧಾಕರ್ ಅವರು ಸುಮಾರು 20 ಸಾವಿರ ಮತಗಳಿಂದ ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧವಾಗಿ ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ.” ಎಂದು ಹೇಳಿದ್ದಾರೆ.