ಉತ್ತರಕಾಶಿ ಜಿಲ್ಲೆಗೆ ಟ್ರೆಕ್ಕಿಂಗ್ ಹೋಗಿದ್ದ 22 ಮಂದಿಯ ಪೈಕಿ 9 ಮಂದಿ ಸಾವು….!

ಉತ್ತರಾಖಂಡ್ ರಾಜ್ಯಕ್ಕೆ ಚಾರಣಕ್ಕೆ ಹೋಗಿದ್ದ ಕರ್ನಾಟಕದ 9 ಮಂದಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಉತ್ತರಕಾಶಿ ಜಿಲ್ಲೆಗೆ ಟ್ರೆಕ್ಕಿಂಗ್ ಹೋಗಿದ್ದ 22 ಮಂದಿಯ ಪೈಕಿ 9 ಮಂದಿ ಸಾವನ್ನಪ್ಪಿದ್ದು, ಉಳಿದವರ ಪೈಕಿ 6 ಮಂದಿ ರಕ್ಷಣೆ ಮಾಡಲಾಗಿದೆ.
ಇನ್ನು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಬರೆದುಕೊಂಡಿದ್ದಾರೆ. ಉತ್ತರಾಖಂಡದ ಶಾಸ್ತ್ರತಾಳ್ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ.

ಸಚಿವರಾದ ಕೃಷ್ಣ ಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.

Related Post

Leave a Reply

Your email address will not be published. Required fields are marked *