Breaking
Tue. Dec 24th, 2024

ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಆಹ್ವಾನ…!

ಬೆಂಗಳೂರು : ಭಾನುವಾರ (ಜುಲೈ 9) ದಂದು ನಡೆಯಲಿರುವ ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ   ಅವರಿಗೆ ಆಹ್ವಾನ ನೀಡಲಾಗಿದೆ.
ಆಹ್ವಾನ ಹಿನ್ನೆಲೆಯಲ್ಲಿ ಬಿಎಸ್‌ವೈ ಅವರು ಶನಿವಾರ ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ. ಕಾರ್ಯಕ್ರಮ ಮುಗಿಸಿ ಭಾನುವಾರದಂದು ದೆಹಲಿಯಲ್ಲಿಯೇ ಉಳಿದುಕೊಳ್ಳಲಿರುವ ಅವರು ಸೋಮವಾರ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಜೂನ್‌ 9 ರ ಸಂಜೆ 6 ಗಂಟೆಗೆ ನರೇಂದ್ರ ಮೋದಿಯವರು  ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ದಕ್ಷಿಣ ಏಷ್ಯಾದ ಉನ್ನತ ನಾಯಕರನ್ನು ಆಹ್ವಾನಿಸಲಾಗಿದೆ ಎನ್ನಲಾಗಿದೆ.
ಇಂದು ದೆಹಲಿಯ ಹಳೆ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಸಂಸದೀಯ ಸಭೆ ನಡೆಯಿತು. ಈ ಸಭೆಯಲ್ಲಿ ಎಲ್ಲಾ ನಾಯಕರು ಸರ್ವಾನುಮತದಿಂದ ಪ್ರಧಾನಿ ಸ್ಥಾನಕ್ಕೆ ಮೋದಿಯವರ ಹೆಸರನ್ನು ಅನುಮೋದಿಸಿದರು. ಬಳಿಕ ಸಂಜೆ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡನೆ ಮಾಡಿದರು. ಈ ವೇಳೆ ಮೋದಿಯವರಿಗೆ ಎನ್‌ಡಿಎ ಮೈತ್ರಿಕೂಟದ ನಾಯಕರು ಸಾಥ್‌ ನೀಡಿದರು.

Related Post

Leave a Reply

Your email address will not be published. Required fields are marked *