Breaking
Tue. Dec 24th, 2024

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವ‌ರ್ ನಿವಾಸದ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧನ…..!

ಚಿಕ್ಕಬಳ್ಳಾಪುರ, (ಜೂ.07): ಲೋಕಸಭಾ ಚುನಾವಣೆಯ ಫಲಿತಾಂಶ ಪ್ರ.ವಾದ ದಿನದ ರಾತ್ರಿಯೇ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂಬುವವರನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆಯ ಮೇಲೆ ಕಲ್ಲು ಹೊಡೆದಿದ್ದಾಗಿ ನಿಂತಿದೆ.
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಜೂನ್ 04 ರಂದು ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈರ್ಶ್ವ ನಿವಾಸಕ್ಕೆ ರಾತ್ರಿ ಕಲ್ಲು ಹೊಡೆದಿದ್ದರು. ಇದರಿಂದ ಮನೆ ಕಿಟಕಿ ಗಾಜು ಪುಡಿಪುಡಿಯಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರಿಗೆ ದೌಡಾಯಿಸಿ ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಪ್ರಕರಣಕ್ಕೆ ಪತ್ತೆಯಾಗಿರುವ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಗೃಹ ಕಚೇರಿ ಮೇಲೆ ಜೂನ್ 04 ರಾತ್ರಿ 10 ಗಂಟೆ 30 ನಿಮಿಷದ ಸುಮಾರಿಗೆ ಕಲ್ಲು ತೆಗೆಯಲಾಯಿತು. ಘಟನೆಯಲ್ಲಿ ಮನೆಯ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜಿನ ಪುಡಿ ಪುಡಿಯಾಗಿತ್ತು. ವಿಷಯ ತಿಳಿಯದಂತೆ ಶಾಸಕರ ನಿವಾಸದ ಬಳಿ ಚಿಕ್ಕಬಳ್ಳಾಪುರ ಡಿವೈಎಸ್ ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related Post

Leave a Reply

Your email address will not be published. Required fields are marked *