Breaking
Wed. Dec 25th, 2024

ನಕಲಿ ವೈದ್ಯಕೀಯ ವೃತ್ತಿಯನ್ನು ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಮಹತ್ವದ ಆದೇಶ ಜಾರಿಗೆ….!

ಬೆಂಗಳೂರು, ಜೂ.08: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದೆ. ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME  ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ.
ಬಣ್ಣ ಸಂಹಿತೆ ಕಡ್ಡಾಯ; ತಪ್ಪಿದರ ಕಾನೂನು ಕ್ರಮ ಇಷ್ಟೇ ಅಲ್ಲದೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.
ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Related Post

Leave a Reply

Your email address will not be published. Required fields are marked *