ಭಾರತದ ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ  ಇಂದು ಪ್ರಮಾಣ ವಚನ ಸ್ವೀಕಾರ….!.

ನವದೆಹಲಿ : ಭಾರತದ ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ  ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೊದಲು ಇಂದು 30 ಸಚಿವರು ಪ್ರಮಾಣ ವಚನ  ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅವರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, 5 ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಸೇರಿದ್ದಾರೆ.
ಈ ನೂತನ ಮೋದಿ ಟೀಂಗೆ ಯಾವ ಖಾತೆಗಳನ್ನು ನೀಡಬೇಕೆಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. 73 ವರ್ಷದ ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳ ಯುಪಿಎ ಆಡಳಿತದ ನಂತರ 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾದ ನಂತರ ಮೊದಲ ಬಾರಿಗೆ ತಮ್ಮ 3ನೇ ಅವಧಿಗೆ ಅಥವಾ ಮೋದಿ 3.0ನಲ್ಲಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲಿದ್ದಾರೆ.
ರಾಷ್ಟ್ರಪತಿ ಭವನದ ಹುಲ್ಲುಹಾಸಿನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ನೂತನ ಸಚಿವ ಸಂಪುಟದ ಸದಸ್ಯರು ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜವಾಹರಲಾಲ್ ನೆಹರು ಅವರ ನಂತರ ನರೇಂದ್ರ ಮೋದಿ 3 ಅವಧಿಗೆ ಅಧಿಕಾರ ನಡೆಸಿದ ಮೊದಲ ಪ್ರಧಾನಿಯಾಗಲಿದ್ದಾರೆ. ನಿನ್ನೆ ಪ್ರಧಾನಿ ನಿವಾಸದಲ್ಲಿ 11 ಗಂಟೆಗಳ ಕಾಲ ನಡೆದ ಮ್ಯಾರಥಾನ್ ಸಭೆಯ ನಂತರ ನೂತನ ಸಚಿವ ಸಂಪುಟದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ.
ರಾಷ್ಟ್ರಪತಿ ಭವನದಲ್ಲಿ ಮೂರು ಹಂತದ ಭದ್ರತೆಯನ್ನು ಏರ್ಪಡಿಸಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಕಾರ್ಯಕ್ರಮಕ್ಕಾಗಿ ದೆಹಲಿಯು ಹೆಚ್ಚಿನ ಅಲರ್ಟ್‌ನಲ್ಲಿರುವುದರಿಂದ ದೆಹಲಿ ಪೊಲೀಸ್‌ನ SWAT ಮತ್ತು NSGಯ ಕಮಾಂಡೋಗಳನ್ನು ಸ್ಥಳ ಮತ್ತು ಇತರ ಆಯಕಟ್ಟಿನ ಸ್ಥಳಗಳ ಸುತ್ತಲೂ ನಿಯೋಜಿಸಲಾಗಿದೆ.

Related Post

Leave a Reply

Your email address will not be published. Required fields are marked *