Breaking
Thu. Dec 26th, 2024

ವರ್ಷಾ ಅವರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ….!

ಚಾಮರಾಜನಗರ, ಜೂ.09: ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ. ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು  ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಪದಗ್ರಹಣಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರಿಗೆ ಆಹ್ವಾನಿಸಲಾಗಿದೆ.
ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ : ಮೋದಿ ಅವರ ಮನ್‌ಕಿ ಬಾತ್ನಿಂದ ಪ್ರೇರಣೆಗೊಂಡು ಕರಕುಶಲ ಉದ್ಯಮ ಆರಂಭಿಸಿದ್ದರು. ಅನುಪಯುಕ್ತ ಬಾಳೆ ದಿಂಡಿನಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಉದ್ಯಮ ನಡೆಸುತ್ತಿರುವ ವರ್ಷಾ, ಹಲವು ಮಹಿಳೆಯರಿಗೆ ಉದ್ಯಮ ನೀಡುವ ಜೊತೆಗೆ ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ. ವರ್ಷಾ ಸಾಧನೆಯ ಬಗ್ಗೆಯು ಮನ್.ಕಿ ಬಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವೋಕಲ್ ಫಾರ್ ಲೋಕಲ್ ಎಂದು ಪ್ರಶಂಸಿದ್ದರು. ಇದೀಗ ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದ್ದು, ಈಗಾಗಲೇ ನವದೆಹಲಿ ತಲುಪಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಕಾಶವಾಣಿಯಲ್ಲಿ ಪ್ರತಿ ತಿಂಗಳು ನಡೆಸಿಕೊಡುವ ಮನ್ ಕಿ ಬಾತ್ ಕಾರ್ಯಕ್ರಮವೊಂದರಲ್ಲಿ 2023 ನವೆಂಬರ್ 27 ರಂದು ವರ್ಷಾ ಅವರಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ವರ್ಷಾ ಅವರು ಅಲಂಕಾರಿಕ ವಸ್ತುಗಳು ಮತ್ತು ವ್ಯಾನಿಟಿ ಬ್ಯಾಗ್ ನಂತಹ ವಸ್ತುಗಳ ಉತ್ಪಾದನೆ ಮಾಡುತ್ತಾ ಸ್ವಾವಲಂಬಿ ಆಗುವುದರ ಜೊತೆಗೆ ಹಲವರಿಗೆ ಉದ್ಯೋಗವನ್ನೂ ನೀಡಿದ್ದಾರೆ. ವೋಕಲ್ ಫಾರ್ ಲೋಕಲ್ನಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Related Post

Leave a Reply

Your email address will not be published. Required fields are marked *