Breaking
Wed. Dec 25th, 2024

ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ…..!

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ.
ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮೈಸೂರು ಶ್ರೀ ಚಾಮರಾಜೇಂದ್ರ ಮಲಯ ಹಾಗೂ ಕಾರಂಜಿ ಕೆರೆ ಮಧ್ಯದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನೆ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆಯನ್ನು ಆಯ್ಕೆ ಮಾಡಲು 15 ದಿನಗಳ ಪ್ರಸ್ತಾವನೆಯನ್ನು ಮಂಡಿಸಲಾಯಿತು.
ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಗಿದೆ. ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರವನ್ನು ನಿರ್ಮಿಸಲು ನಡೆದಿರುವ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆಯ ವರದಿಯನ್ನು ಪರಿಶೀಲಿಸಿ ಜಾಗತಿಕ ಕೇಂದ್ರಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.
ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕುಗಳಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆಗೆ ಘಟನಾೋತ್ತರ ಅನುಮೋದನೆ ನೀಡಲಾಯಿತು.
ಇತರ ನಿರ್ಣಯಗಳು :ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ನೀರಾವರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಸರ್ಕಾರವು ಅನುಮತಿ ನೀಡಿದ್ದು, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ನಡೆಯುತ್ತಿರುವ ಸಂಪೂರ್ಣ ನೀರು ಹರಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.
ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ನಿರ್ಮಾಣ ನಿರ್ಮಾಣವನ್ನು ನಿರ್ಮಿಸಲಾಗಿದೆ ರಣಹದ್ದು ಸಂರಕ್ಷಣಾ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.
ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟದ ಪೂರೈಕೆಗೆ ಸಮ್ಮತಿ

Related Post

Leave a Reply

Your email address will not be published. Required fields are marked *