ಮಂಗಳೂರು, ಜೂನ್ 10 : ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಪ್ರಮಾಣವಚನ ಸ್ವೀಕರಿಸುತ್ತಿದ್ದ ಹಿನ್ನಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂತೋಷ ಮುಗಿಲುಮುಟ್ಟಿತ್ತು. ಆದರೆ ಇದೆ ಸಂತೋಷ ಕಡಲನಗರಿ ಮಂಗಳೂರಿನಲ್ಲಿ ಚೂರಿ ಇರಿತಕ್ಕೆ ಕಾರಣ. ಭಾರತ್ ಮಾತಾ ಕೀ ಜೈ ಎಂದವರ ಮೇಲೆ ದುರುಳರು ಅಟ್ಟಹಾಸ ಮೆರೆದಿದ್ದಾರೆ.
ಮೋದಿ ಪ್ರಮಾಣವಚನ ಪ್ರಯುಕ್ತ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ಮೆರವಣಿಗೆ ನಡೆಸಿದರು. ಆದರೆ, ಇದೇ ಮೆರವಣಿಗೆಯಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರು ಚೂರಿ ಇರಿತಕ್ಕೆ ಒಳಗಾಗಿದ್ದಾರೆ.
ಬೋಳಿಯಾರ್‌ನಲ್ಲಿ ನಿನ್ನೆ ವಿಜಯೋತ್ಸವದ ಮೆರವಣಿಗೆ ನಡೆದಿದ್ದು, ಮೆರವಣಿಗೆ ಬೋಳಿಯಾರ್ ಮಸೀದಿ ಮುಂದೆ ಸಾಗಿ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಸಾಗಿದ್ದರು. ಇದೇ ಸಂದರ್ಭ ಮುಂದೆ ಇದ್ದ ಯುವಕರ ಗುಂಪೊಂದು ಘೋಷಣೆ ಕೂಗುವುದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಆದ ಬಳಿಕ ಮೆರವಣಿಗೆ ಮುಂದೆ ಸಾಗಿತ್ತು. ಇದಾದ ಬಳಿಕ ವಿಜಯೋತ್ಸವ ಮುಗಿಸಿ ಮಸೀದಿ ಬಳಿ ಹೊಂಡಾ ಆ್ಯಕ್ಟೀವಾದಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರಾದ ಹರೀಶ್, ನಂದಕುಮಾರ್, ಕೃಷ್ಣಕುಮಾರ್ ‘ಬೋಲೋ ಭಾರತ್ ಮಾತಾ ಕೀ ಜೈ’ ಎಂಬ ಘೋಷಣೆ ಕೂಗಿದ್ದರು. ಈ ಸಂದರ್ಭದ ಮುಂದೆ ಮೊದಲೇ ಸೇರಿದ್ದ ಸುಮಾರು 25ಕ್ಕೂ ಹೆಚ್ಚು ಯುವಕರ ಗುಂಪು ಈ ಮೂವರನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಬೋಲಿಯಾರ್‌ನಲ್ಲಿನ ಬಾರ್ ಮುಂಭಾಗದ ಯುವಕರ ಗುಂಪು ಹಾಗೂ ಈ ಮೂವರ ನಡುವೆ ವಾಗ್ವಾದ ಹರೀಶ್ ಹಾಗೂ ನಂದಕುಮಾರ್‌ಗೆ ಚೂರಿಯಿಂದ ಇರಿಯಲಾಗಿದೆ. ಕೃಷ್ಣಕುಮಾರ್‌ಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದು ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
ಹಲ್ಲೆಯಾಗಿರುವುದರಿಂದ ಸ್ಥಳೀಯರು ಸೇರಿ ಗಂಭೀರ ಅನಾರೋಗ್ಯ ಹರೀಶ್ ಹಾಗೂ ನಂದಕುಮಾರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೂರಿಯಿಂದ ಇರಿದ ರಭಸಕ್ಕೆ ಒಬ್ಬನ ಬೆನ್ನಿಗೆ ಗಾಯವಾದ್ರೆ ಇನ್ನೊಬ್ಬನ ಸೊಂಟಕ್ಕೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ. ಇನ್ನು ಸಮಾರಂಭದಲ್ಲಿ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಾವಳಿ ಆಧಾರದ ಮೇಲೆ ಮೂವರನ್ನು ಕೊಣಾಜೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೂರಿ ಇರಿತ ಘಟನೆ ಹಿನ್ನಲೆಯಲ್ಲಿ ಬೋಳಿಯಾರ್‌ನಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇನ್ನು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಘಟನೆಯೊಂದು ಎದುರಾಗಿದ್ದು ಯಾರೇ ಕಾನೂನು ಕೈಗೆತ್ತಿಕೊಂಡರು ಕಠಿಣ ಕ್ರಮ ಆಗುತ್ತೆ ಎಂದು ಹೇಳಿದ್ದಾರೆ.