ಲಿಲೋಂಗ್ವೆ : ಪೂರ್ವ ಆಫ್ರಿಕಾದ ಮಲಾವಿಯ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತು ಇತರ ಒಂಬತ್ತು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಪತನಗೊಂಡಿದ್ದು, ಎಲ್ಲರೂ ಮೃತಪಟ್ಟಿದ್ದಾರೆ.
ದೇಶದ ಉತ್ತರದಲ್ಲಿರುವ ಪರ್ವತ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ. ಒಂದು ದಿನಕ್ಕೂ ಹೆಚ್ಚು ಕಾಲ ಹುಡುಕಾಟ ನಡೆಸಿದ ನಂತರ ವಿಮಾನದ ಅವಶೇಷಗಳು ಪತ್ತೆಯಾಗಿವೆ. ಈ ಬಗ್ಗೆ ಮಲಾವಿಯನ್ ಅಧ್ಯಕ್ಷ ಲಾಜರಸ್ ಚಕ್ವೆರಾ ಅಧಿಕೃತವಾಗಿ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಉಪಾಧ್ಯಕ್ಷ ನಾಪತ್ತೆಯಾಗಿರುವ ಸುದ್ದಿ ಹೊರಬಿದ್ದಿತ್ತು. ಸೈನಿಕರು, ಪೊಲೀಸ್ ಅಧಿಕಾರಿಗಳು ಮತ್ತು ಅರಣ್ಯ ರಕ್ಷಕರು ವಿಮಾನಕ್ಕಾಗಿ ಹುಡುಕಾಟ ನಡೆಸಿದ್ದರು.