Breaking
Mon. Dec 23rd, 2024

ಮೈಸೂರು ದಸರಾದಲ್ಲಿ  ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತ…!

ಮೈಸೂರು, (ಜೂನ್ 11): ಮೈಸೂರು ದಸರಾದಲ್ಲಿ  ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ.
ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಸಾವನಪ್ಪಿದ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಹುಣಸೂರು ಪಿರಿಯಾಪಟ್ಟಣ ಗಡಿ ಭಾಗದಲ್ಲಿರುವ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮ ಆನೆ, ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು.
2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಬಳಿಕ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು. ಶಾಂತ ಹಾಗೂ ಗಾಂಭಿರ್ಯಕ್ಕೆ ಅಶ್ವತ್ಥಾಮ ಆನೆ ಹೆಸರುವಾಸಿಯಾಗಿತ್ತು.
ಕಾದಾಟದಲ್ಲಿ ಪ್ರಾಣತೆತ್ತ ಅರ್ಜುನ ಮೊದಲಿಗೆ ಪುಂಡನಾಗಿ ಕೇಡಿ, ರೌಡಿ, ಕೋಪಿಷ್ಟ ಎಂದೆಲ್ಲ ಕರೆಯಿಸಿಕೊಂಡಿದ್ದರೂ ಆ ನಂತರ ಅರ್ಜುನ ಎಲ್ಲರ ಪ್ರೀತಿಗೆ ಪಾತ್ರನಾಗುವುದರೊಂದಿಗೆ ಮೈಸೂರು ದಸರಾದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದನು.
ಆದರೆ ವಯಸ್ಸಿನ ಕಾರಣದಿಂದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯುಗೆ ನೀಡಿ ತಾನು ನಿಶಾನೆ ಆನೆಯಾಗಿ ಜಂಬೂಸವಾರಿ ಮುನ್ನಡೆಸುವ ಕಾರ್ಯವನ್ನು ವಹಿಸಿಕೊಂಡಿದ್ದನು. ಆದರೆ ಈಗ ಕಾಡಾನೆಗಳಿಂದ ದಾಳಿಗೊಳಗಾಗಿ ಅರ್ಜುನ ಸಾವನ್ನಪ್ಪಿದ್ದ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದ್ದ

Related Post

Leave a Reply

Your email address will not be published. Required fields are marked *