Breaking
Tue. Dec 24th, 2024

ಶೈಕ್ಷಣಿಕ ಪ್ರಗತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಪಟ್ಟಣ ಪಂಚಾಯತಿ ಸದಸ್ಯ ಜೆ.ಆರ್.ರವಿಕುಮಾರ್…!

ನಾಯಕನಹಟ್ಟಿ, ಜೂ.11 : ಶೈಕ್ಷಣಿಕ ಪ್ರಗತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಪಟ್ಟಣ ಪಂಚಾಯತಿ ಸದಸ್ಯ ಜೆ.ಆರ್.ರವಿಕುಮಾರ್ ಹೇಳಿದರು.
ಪಟ್ಟಣದಲ್ಲಿ ಶಾಲಾ ಪರೀಕ್ಷಾ ಮೌಲ್ಯಾಂಕ ಮತ್ತು ನಿರ್ಣಯ ಮಂಡಳಿಯ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪನವರ ಅಭಿಮಾನಿ ಬಳಗದ ವತಿಯಿಂದ ಮಾದಿಗ ಸಮುದಾಯದ ಎಸ್‌ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಣಕ್ಕೆ ಬಡತನ, ಸಿರಿತನದ ತಾರತಮ್ಯವಿಲ್ಲ. ಪರಿಶ್ರಮ ಮತ್ತು ಸತತ ಪ್ರಯತ್ನ ಅಗತ್ಯ. ಗ್ರಾಮೀಣ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಕರ ಪೋಷಕರ ಸಹಕಾರ ಅಗತ್ಯವಿದೆ.
ಇತರ ಗ್ರಾಮೀಣ ಭಾಗದಲ್ಲಿ ಮಕ್ಕಳ ಪೋಷಕರ ಅನಕ್ಷರತೆ, ಜೀವನ ನಡೆಸಲು ಕಷ್ಟದ ಪರಿಸ್ಥಿತಿಯಲ್ಲಿ ತಮ್ಮ ಮಕ್ಕಳಿಗೆ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಇಂತಹ ಕೆಲಸವನ್ನು ಮಾಡಬಾರದು. ಸರ್ಕಾರವು ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮಪರ್ಕವಾಗಿ ಬಳಸಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಲಾಯಿತು.
ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಲು ಶಿಕ್ಷಣ ಸಹಕಾರಿಯಾಗಿದೆ. ಹೀಗಾಗಿ ಎಲ್ಲ ಕಾಳಜಿ, ಶಿಕ್ಷಕರು ಕಾಳಜಿ ವಹಿಸಬೇಕು. ಸೀಮಿತ ಸಮುದಾಯದ ಪ್ರೋತ್ಸಾಹ ನೀಡುವುದರ ಜೊತೆಗೆ ಇತರ ಎಲ್ಲಾ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಲು ಸಲಹೆ ನೀಡಿ.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಚನ್ನಕೇಶವ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶಿಕ್ಷಕರೊಂದಿಗೆ ಪಾಲಕರು ಸಹಕರಿಸಬೇಕು. ಹಿಂದುಳಿದ ಮಕ್ಕಳಿಗೆ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಮುಖ್ಯಶಿಕ್ಷಕರಾದ ಎನ್.ಮಹಂತೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರ ಅತ್ಯಂತ ಮಹತ್ವದಿಂದ ಕೂಡಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು ಬೆಳೆಯಬೇಕಾದರೆ ಮನೆಯ ಪರಿಸರ ಹಾಗೂ ಶಾಲೆಯ ಪರಿಸರ ಮತ್ತು ಅತಿ ಮುಖ್ಯ. ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ ಪಠ್ಯದಷ್ಟೇ ಇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯವಾಯಿತು.
ಎಸ್‌ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಮಂಜುಶ್ರೀ, ವರುಣಾ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಂಕರಸ್ವಾಮಿ, ಪಂಚಾಯತಿ ಮಾಜಿ ಸದಸ್ಯರಾದ ಆರ್.ಶ್ರೀಕಾಂತ್, ಮರಿಪಾಲಯ್ಯ, ಮುಖಂಡರಾದ ತಾರಕೇಶ್, ಮಲ್ಲಿಕಾರ್ಜುನ್, ಎಂ.ಅಜಯ್, ರಾಕೇಶ್, ಅಖಿಲೇಶ್.

Related Post

Leave a Reply

Your email address will not be published. Required fields are marked *