ಚಿತ್ರದುರ್ಗ : ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ಕೊಲೆಯಾಗಿರುವ ರೇಣುಕಾ ಸ್ವಾಮಿ ಮೃತದೇಹವನ್ನು ಚಿತ್ರದುರ್ಗಕ್ಕೆ ರಾತ್ರಿ 8 : 40 ಕ್ಕೆ ತುರುವನೂರು ರಸ್ತೆಯ ವಿ.ಆರ್.ಎಸ್ ಬಡಾವಣೆಗೆ ತಲುಪಿತು.
ಇಂದು ಮಧ್ಯಾಹ್ನವೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ರೇಣುಕಾಸ್ವಾಮಿ ದೇಹದ ಮೇಲೆಲ್ಲಾ ದಾಳಿ ಮಾಡಿದ ಗಾಯಗಳಾಗಿರುವುದು ಕಂಡು ಬಂದಿದೆ. ಮುಖದ ಮೂಳೆ ಮುರಿದಿದ್ದಾರೆ, ಮೂಗನ್ನು ಜಜ್ಜಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹ ರವಾನೆ ಮಾಡಲಾಗಿದೆ. ಪೋಷಕರು ಬೆಂಗಳೂರಿನಿಂದ ಮೃತದೇಹದ ಜೊತೆಗೆ ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ. ಈಗ ಮೃತದೇಹ ಊರು ತಲುಪಿದೆ.
ಇಂದೇ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಸಂಜೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎನ್ನಲಾಗಿತ್ತು. ಆದರೆ ಮೃತದೇಹ ಈಗ ತಲುಪಿದ್ದು ಅಂತ್ಯಕ್ರಿಯೆಯನ್ನು ಇಂದೇ ನಡೆಸಲಾಗುತ್ತದೆ. ವೀರಶೈವ ಲಿಂಗಾಯತ ಸಮುದಾಯ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ನಗರದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗಳು ನಡೆಸಲಾಗುತ್ತದೆ.
ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಅವರನ್ನ ಜೂನ್ 9ರಂದು ಚಿತ್ರ ಹಿಂಸೆ ಕೊಟ್ಟು ಕೊಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 13 ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ.