Breaking
Wed. Dec 25th, 2024

ಕುವೈಟ್‌ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿ ಮೃತ….!

ಬೆಂಗಳೂರು/ ಕುವೈಟ್‌ ನಗರ: ಕುವೈಟ್‌ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆಳಂದ ತಾಲೂಕಿನ ವಿಜಯ್ ಕುಮಾರ್ ಪ್ರಸನ್ನ ಮೃತ ವ್ಯಕ್ತಿ. ಅಗ್ನಿ ದುರಂತದಲ್ಲಿ ಒಟ್ಟು 40 ಭಾರತೀಯರು ಸಾವನ್ನಪ್ಪಿದ್ದಾರೆ.
ಕುವೈತ್‌ನ ದಕ್ಷಿಣದಲ್ಲಿರುವ ಅಹ್ಮದಿ ಆಡಳಿತ ಪ್ರಾಂತ್ಯದ ಮಂಗಾಫ್‌ ಪ್ರದೇಶದ 6 ಮಹಡಿಗಳ ಕಟ್ಟಡವೊಂದರಲ್ಲಿ ಅಡುಗೆ ಮನೆಯಲ್ಲಿ ಬುಧವಾರ ಬೆಂಕಿ ಹೊತ್ತಿಕೊಂಡಿತ್ತು. ಇದು ದುರಂತಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದಲ್ಲಿ ಒಂದೇ ಕಂಪನಿಯ 160 ಮಂದಿ ಕೆಲಸಗಾರರು ವಾಸಿಸುತ್ತಿದ್ದರು. ಮೃತಪಟ್ಟವರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

Related Post

Leave a Reply

Your email address will not be published. Required fields are marked *