ಬಿಗ್ ಬಾಸ್ ಕನ್ನಡ 10′ ಸ್ಪರ್ಧಿ ಸಿರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ ಜೊತೆ ಸಿರಿ ಹಸೆಮಣೆ ಏರಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ ಸಿರಿ ಮತ್ತು ಉದ್ಯಮಿ ಪ್ರಭಾಕರ್ ಮದುವೆ ಗುರುಹಿರಿಯರ ಸಮ್ಮುಖದಲ್ಲಿ ಜರುಗಿದೆ. ಪ್ರಭಾಕರ್ ಅವರು ಮೂಲತಃ ಮಂಡ್ಯದವರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಗುರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದ್ದು, ಜೂನ್ 13ರಂದು ಸರಳವಾಗಿ ಮದುವೆ ನಡೆದಿದೆ. ಸದ್ಯ ನಟಿಯ ಮದುವೆ ಸುದ್ದಿ ಕೇಳಿ ಅಭಿಮಾನಿಗಳು ಶುಭಕೋರುತ್ತಿದ್ದಾರೆ.
ಅಂದಹಾಗೆ, ಮನೆಯೊಂದು ಮೂರು ಬಾಗಿಲು, ರಂಗೋಲಿ, ಬದುಕು ಸೀರಿಯಲ್‌ಗಳು ಮೂಲಕ ಟಿವಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಸೀಸನ್ 10ರ ಬಿಗ್ ಬಾಸ್ ಕನ್ನಡ ಶೋನಿಂದ ನಟಿ ಸಿರಿ ಹೆಚ್ಚಿನ ಜನಪ್ರಿಯತೆ ಗಳಿಸಿದ್ದಾರೆ