ಕರ್ನಾಟಕ ಮಾಹಿತಿ ಆಯೋಗದಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹರಿಂದ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾಹಿತಿ ಹಕ್ಕು ಕಾಯ್ದೆ 2005 ರ ಅಧ್ಯಾಯ IV ರನ್ವಯ ಕಾನೂನು, ವಿಜ್ಞಾನ, ತಂತ್ರಜ್ಞಾನ, ಸಮಾಜ ಸೇವೆ, ನಿರ್ವಹಣೆ (ಮ್ಯಾನೇಜ್ಮೆಂಟ್), ಪತ್ರಿಕೋದ್ಯಮ, ಸಮೂಹ ಮಾಧ್ಯಮ ಅಥವಾ ಆಡಳಿತ (ಅಡ್ಮಿನಿಸ್ಟ್ರೇಷನ್ ಮತ್ತು ಗವರ್ನೆನ್ಸ್) ರಲ್ಲಿ ವಿಶಾಲ ತಿಳುವಳಿಕೆ ಮತ್ತು ಅನುಭವ ಹೊಂದಿರುವ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳನ್ನು ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಕಾತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪ್ರಸ್ತುತ ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ 01 ಹುದ್ದೆ ಹಾಗೂ ರಾಜ್ಯ ಮಾಹಿತಿ ಆಯುಕ್ತರ 01 ಹುದ್ದೆಯನ್ನೂ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಉದ್ಯೋಗ ಇಲಾಖೆ ಕರ್ನಾಟಕ ಮಾಹಿತಿ ಆಯೋಗ
ನೇಮಕಾತಿ ಪ್ರಾಧಿಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಸಂಖ್ಯೆ 01
ರಾಜ್ಯ ಮಾಹಿತಿ ಆಯುಕ್ತರ ಹುದ್ದೆ ಸಂಖ್ಯೆ 01
ಹುದ್ದೆಯ ಅವಧಿ 3 ವರ್ಷ.
ಮುಖ್ಯ ಮಾಹಿತಿ ಆಯುಕ್ತ / ಮಾಹಿತಿ ಆಯುಕ್ತರ ಹುದ್ದೆಗಳಿಗೆ ಅರ್ಹತೆಗಳು
ಸಂಸತ್ ಸದಸ್ಯರಾಗಲೀ ಅಥವಾ ಯಾವುದೇ ರಾಜ್ಯದ ಅಥವಾ ಕೇಂದ್ರಾಡಳಿತ ಪ್ರದೇಶದ ವಿಧಾನಮಂಡಲದ ಸದಸ್ಯರಾಗಿರತಕ್ಕದ್ದಲ್ಲ.
ಅಥವಾ ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿರತಕ್ಕದ್ದಲ್ಲ.
ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕ ಹೊಂದಿರತಕ್ಕದ್ದಲ್ಲ.
ಅಥವಾ ಯಾವುದೇ ವ್ಯಾಪಾರ ವ್ಯವಹಾರವನ್ನಾಗಲೀ ಅಥವಾ ಯಾವುದೇ ವೃತ್ತಿಯನ್ನು ಮಾಡತಕ್ಕದ್ದಲ್ಲ. ಈ ಹುದ್ದೆಗಳಿಗೆ ಅರ್ಜಿ ಹಾಕುವವರು ಕರ್ನಾಟಕದ ಯಾವುದೇ ಪೀಠದಲ್ಲಿ ಸೇವೆ ಸಲ್ಲಿಸುವುದಕ್ಕೆ ಸಿದ್ಧರಿರಬೇಕು.
ಆಯ್ಕೆಗೊಂಡ ಅಭ್ಯರ್ಥಿಗಳು ಘನತೆವೆತ್ತ ರಾಜ್ಯಪಾಲರು ನಿಗದಿಪಡಿಸಿದ ದಿನಾಂಕದಂದು ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಿರಬೇಕು.
ಈ ಹುದ್ದೆಗಳಿಗೆ ನೇಮಕಾತಿ ಹೊಂದಲು ಮೇಲಿನ ಮಾನದಂಡಗಳನ್ನು ಪೂರೈಸಿರುವವರು ಮತ್ತು ನೇಮಕಗೊಳ್ಳಲು ಆಸಕ್ತರಾದವರು ತಮ್ಮ ವ್ಯಕ್ತಿಗತ ವಿವರಗಳನ್ನು ಅಧಿಸೂಚನೆಗೆ ಲಗತ್ತಿಸಿರುವ ನಮೂನೆಯಲ್ಲಿ ಅಂಚೆ ಮೂಲಕ ಅಥವಾ ಖುದ್ದಾಗಿ ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು. ಅಧಿಸೂಚನೆ ಹಾಗೂ ಅರ್ಜಿ ನಮೂನೆಗಾಗಿ ವೆಬ್‌ಸೈಟ್ www.kic.gov.in ಗೆ ಭೇಟಿ ನೀಡಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ಸ್ಥಳ : ಕೊಠಡಿ ಸಂಖ್ಯೆ – 608, ಮಾಹಿತಿ ಹಕ್ಕು ಶಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ), 1ನೇ ಗೇಟ್, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು- 560001.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-07-2024 ರ ಸಂಜೆ 05-30 ಗಂಟೆಯೊಳಗೆ.