ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಭೂತರಾಮನಹಟ್ಟಿಯ ಕಿರು ಮೃಗಾಲಯದ ಎದುರು ನಡೆದಿದೆ.
ಕೊಲ್ಹಾಪುರದಿಂದ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಧಾರವಾಡ ವಿಶ್ವವಿದ್ಯಾಲಯ ನೋಡಿಕೊಂಡು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮೀಪ ಇರುವ ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಭೇಟಿ ನೀಡಿ ಮರಳಿ ಕೊಲ್ಲಾಪುರಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ.
ಗಾಯಾಳು ವಿದ್ಯಾರ್ಥಿಗಳನ್ನು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.