ಚಿತ್ರದುರ್ಗ, ಜೂ.15 : ಲಾರಿಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48 (4) ರಲ್ಲಿ ನಡೆದಿದೆ. ತಾಲ್ಲೂಕಿನ ಭರಮಸಾಗರದ ಚಿಕ್ಕಬೆನ್ನೂರು ಬಳಿ ಈ ದುರಂತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುತ್ತಿದ್ದ ಲಾರಿಯ ಟೈರ್ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನುಳಿದ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮೃತರನ್ನು ಪ್ರಜ್ವಲ್ ರೆಡ್ಡಿ (30 ವರ್ಷ), ಹರ್ಷಿತಾ (28 ವರ್ಷ) ಮತ್ತು ಮಗು ಸೋಹನ್ (2 ವರ್ಷ) ಗಾಯಗೊಂಡವರನ್ನು ಶಿಲ್ಪ, ಸ್ವರ್ಣ ಜಾರ್ಜ್, ಮಧುಮಿತ, ವಿಜಯ್ ರೆಡ್ಡಿ, ಕೃಷ್ಣ, ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.