ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ : ಬೆಂಗಳೂರು ನಗರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ದಕ್ಷಿಣ ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳ ಬಗ್ಗೆ ಅರಿವಿರುವ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಎರಡು ಅಧಿಕಾರೇತರ ಸದಸ್ಯರನ್ನು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ ಎನ್.ಜಿ.ಓ ರೊಂದಿಗೆ ಸಂಪರ್ಕ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಇಬ್ಬರ ಸದ್ಯಸರನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.