ಬೆಂಗಳೂರು, ಜೂನ್ 17 : ನಾಡಿನಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗವಹಿಸಿದ್ದಾರೆ.
ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಅವರು ಹಾಜರಾಗಲು ಪಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿರುವ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಯಿತು. ಪ್ರಾರ್ಥನೆ ಮುಗಿಯುವವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ಚಾಮರಾಜಪೇಟೆ ರಸ್ತೆ ಸಂಪರ್ಕಿಸುವ ಕೆಆರ್ ಮಾರುಕಟ್ಟೆ ರಸ್ತೆ ಚಾಮರಾಜಪೇಟೆ, ಬಸವನಗುಡಿ ರಸ್ತೆಗಳನ್ನು ಬಂದ್ ಮಾಡಲಾಗಿದೆ, ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗವನ್ನು ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಲು ಹಾಕಿ ಅವರನ್ನು ಸನ್ಮಾನಿಸಿದ ಸಚಿವ ಜಮೀರ್ ಅಹಮ್ಮದ್ ಸನ್ಮಾನಿಸಿದರು.