ಚಿತ್ರದುರ್ಗ, ಜೂನ್ : ಇತ್ತೀಚೆಗೆ ಭೀಕರವಾಗಿ ಹತ್ಯೆ ಆಗಿರುವ ರೇಣುಕಸ್ವಾಮಿ ಅವರ ಮನೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಜಗದ್ಗುರುಗಳು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ರೇಣುಕಸ್ವಾಮಿ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು ಜೊತೆಗೆ ಆತನ ಪತ್ನಿಗೆ ಸರಕಾರಿ ಉದ್ಯೋಗ ನೀಡಬೇಕು.
ಗೃಹ ಸಚಿವರಾಗಲಿ ಮುಖ್ಯ ಮಂತ್ರಿಗಳಾಗಲಿ ಕುಟುಂದವರನ್ನು ಭೇಟಿ ಮಾಡಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರಲ್ಲದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೃತ ರೇಣುಕಸ್ವಾಮಿ ತಂದೆ ಕಾಶಿನಾಥಸ್ವಾಮಿ ಶಿವನಗೌಡರು ತಾಯಿ ರತ್ನಪ್ರಭಾ ಹಾಗೂ ಅವರ ಕುಟುಂಬದವರು ಇದ್ದರು.