ಧಾರವಾಡ ಜೂನ್ 18 : ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಅವರು ಇಂದು ಸಂಜೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಸಮ್ಮೇಳನದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ, ರೈತರನ್ನು ಉದ್ದೇಶಿಸಿ. ಪ್ರಧಾನಮಂತ್ರಿ ಕೃಷಿ ಸಮ್ಮಾನ ಯೋಜನೆ 2019 ರಲ್ಲಿ ಪ್ರಾರಂಭವಾಯಿತು, ಇಲ್ಲಿಯವರೆಗೆ ರೈತರಿಗೆ ಡಿಬಿಟಿ ಮೂಲಕ ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ವರ್ಷಕ್ಕೆ ರೂ. 6 ಸಾವಿರಗಳನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿದೆ.
ಒಟ್ಟು ಇಲ್ಲಿಯವರ 16 ಕಂತುಗಳಲ್ಲಿ ಕೃಷಿ ಸಮ್ಮಾನ ಸಹಾಯಧನ ಸಹಾಯ. ಈಗ ಇಂದು 17 ನೇ ಕಂತು ಬಿಡುಗಡೆ ಮಾಡಿ, ಪ್ರಧಾನಿಗಳು ರೈತರ ಖಾತೆಗೆ ಜಮೆ ಮಾಡಿದ್ದಾರೆ ಎಂದು ಅವರು ಹೇಳಿದರು. ಧಾರವಾಡ ಜಿಲ್ಲೆಯ 1 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು 20 ಕೋಟಿ ಪಿಎಂ-ಕಿಸಾನ ಸಮ್ಮಾನ ಯೋಜನೆಯ ಸಹಾಯಧನ ಇಂದು ಜಮೆ ಆಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ಸಖಿಯರಾದ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರೇಣುಕಾ ಹುಬ್ಬಳ್ಳಿ, ನವಲಗುಂದ ತಾಲೂಕಿನ ಶಿಲ್ಪಾ ಹೊಸವಕ್ಕಲ, ಅಣ್ಣಿಗೇರಿ ತಾಲೂಕಿನ ಸಬಿನಾ ಬೇಗಂ, ಉತ್ತರಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ದೀಪಾ ಕಾನಮಕರ, ಹಾವೇರಿ ಜಿಲ್ಲೆಯ ಯಶೋಧಾ ಬಾರ್ಕಿ ಅವರಿಗೆ ಪ್ರಮಾಣ ಪತ್ರ ವಿತರಿಸಿ, ಸಚಿವ ಎಚ್.ಡಿ.ಕುಮಾರಸ್ವಾಮಿ ಶುಭ ಹಾರೈಸಿದರು.
ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಎಸ್.ಎಸ್.ಅಂಗಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ.ಸುರೇಖಾ ಸಂಕನಗೌಡರ ಕಾರ್ಯಕ್ರಮ ನಿರೂಪಿಸಿ.
ಕಾರ್ಯಕ್ರಮದಲ್ಲಿ ಧಾರವಾಡ ಕೃಷಿ ವಿಜ್ಞಾನ ಕೇಂದ್ರ ನಿರ್ದೇಶಕ ಡಾ. ಕಾಂಬ್ರೆಕರ ಹಾಗೂ ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು, ರೈತ ಪ್ರಮುಖರು ಮತ್ತು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆಗಳ 500ಕ್ಕೂ ಹೆಚ್ಚು ಕೃಷಿ ಸಖಿಯರು ಭಾಗವಹಿಸಿದ್ದರು, ಪ್ರಧಾನ ಮಂತ್ರಿಗಳ ಪಿಎಂ-ಕಿಸಾನ ಸಮ್ಮೇಳನದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.