Breaking
Tue. Dec 24th, 2024

ಯುವತಿ ರಿವರ್ಸ್ ಗೇರ್ನಲ್ಲಿದ್ದಾಗ ಏಕಾಏಕಿ ಎಕ್ಸಲೇಟರ್ ಒತ್ತಿದ ಪರಿಣಾಮ ಕಾರು ಕಂದಕಕ್ಕೆ ಬಿದ್ದು ಶ್ವೇತಾ ಸುರ್ವಾಸೆ ಸಾವು….!

ಕಾರು ಚಲಾಯಿಸುತ್ತಿದ್ದ ಯುವತಿ ರಿವರ್ಸ್ ಗರ್ನಲ್ಲಿದ್ದಾಗ ಏಕಾಏಕಿ ಎಕ್ಸಲೇಟರ್ ಒತ್ತಿದ ಪರಿಣಾಮ ಕಾರು ಕಂದಕಕ್ಕೆ ಬಿದ್ದು ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದಲ್ಲಿ 23 ವರ್ಷದ ಯುವತಿ ಆಕಸ್ಮಿಕವಾಗಿ ರಿವರ್ಸ್ ಗರ್ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್ ಬ್ಯಾರಿಯರ್ ಅನ್ನು ಮುರಿದು ಕಂದಕಕ್ಕೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾಳೆ. ಕಾರು ರಿವರ್ಸ್ ಗೇರ್ ನಲ್ಲಿದ್ದಾಗ ಯುವತಿ ಕ್ಲಚ್ ಬದಲಿಗೆ ಎಕ್ಸಲೇಟರ್ ಒತ್ತಿ ಪರಿಣಾಮ ಕಾರು ನೇರವಾಗಿ ಕಂದಕಕ್ಕೆ ಬಿದ್ದಿದೆ. 

ಸುಲಿಭಂಜನ್ ಪ್ರದೇಶದಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದ್ದು, ಯುವತಿಯನ್ನು ಶ್ವೇತಾ ಸುರ್ವಾಸೆ ಎಂದು ಗುರುತಿಸಲಾಗಿದೆ. ಸ್ನೇಹಿತ ಶಿವರಾಜ್ ಮುಳೆ ಕಾರಿನಲ್ಲಿ ಸಂಭಾಜಿನಗರದಿಂದ ದತ್ ಮಂದಿರ ಪ್ರದೇಶಕ್ಕೆ ಬಂದಿದ್ದರು. ಶಿವರಾಜ್ ಇತ್ತೀಚೆಗಷ್ಟೇ ಶ್ವೇತಾಳಿಗೆ ಕಾರು ಓಡಿಸಲು ಕಲಿಸಿದ್ದ.

ಶ್ವೇತಾಗೆ ಕಾರು ಓಡಿಸುವಾಗ ರೀಲ್‌ಗಳನ್ನು ತಯಾರಿಸುವ ಆಸೆ ಇತ್ತು. ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್ ಮಾಡುವಂತೆ ಕೇಳಿದ್ದಳು. ಇದ್ದಕ್ಕಿದ್ದಂತೆ ಕಾರು ರಿವರ್ಸ್ ಗೇರ್‌ನಲ್ಲಿ ಚಲಿಸಲು ಪ್ರಾರಂಭಿಸಿತು ಮತ್ತು ಶ್ವೇತಾ ಎಕ್ಸಲೇಟರ್ ಅನ್ನು ಒತ್ತಿದ್ದಾಳೆ. ಥಟ್ಟನೆ ಶ್ವೇತಾಳ ಕಾರು ವೇಗವಾಗಿ ಹಿಂದಕ್ಕೆ ಚಲಿಸತೊಡಗಿತು. 

ಶಿವರಾಜ್ ಕ್ಲಚ್ ಕ್ಲಚ್ ಎಂದು ಎಷ್ಟು ಕೂಗಿದರೂ ಆಕೆಗೆ ಕೇಳಲೇ ಇಲ್ಲ, ಅಷ್ಟರಲ್ಲೇ ಕಾರು ಕೆಳಗೆ ಬಿದ್ದಿದೆ. ಕಾರು ಚಾಲನೆ ಮಾಡುವಾಗ ಆಕೆಯ ಸ್ನೇಹಿತ ಶಿವರಾಜ್ ಎಂಬಾತ ವಿಡಿಯೋ ಮಾಡುತ್ತಿದ್ದು, ಕಾರು ರಿವರ್ಸ್ ಗರ್ನಲ್ಲಿದ್ದಾಗ ಅಕಸ್ಮಾತ್ ಆಗಿ ಆಕ್ಸಲರೇಟರ್ ಒತ್ತಿ ಈ ಅವಘಡ ಸಂಭವಿಸಿದೆ.

ರಕ್ಷಣಾ ಸಿಬ್ಬಂದಿ ಆ ಪ್ರದೇಶವನ್ನು ತಲುಪಲು ಗಂಟೆಗಳ ಸಮಯವನ್ನು ತೆಗೆದುಕೊಂಡರು, ತಕ್ಷಣ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ, ಆಕೆ ಸಾವನ್ನಪ್ಪಿದ್ದಾಳೆ. ಒಂದೊಮ್ಮೆ ಕಾರು ರಿವರ್ಸ್ ಗೇರ್‌ನಲ್ಲಿರುವಾಗ ಆಕ್ಸಲರೇಟರ್ ಒತ್ತಿದರೆ ಕಾರು ನಾವಂದುಕೊಂಡಿದ್ದಕ್ಕಿಂತ ವೇಗವಾಗಿ ಚಲಿಸುವ ಸಾಧ್ಯತೆಯಿದೆ.

Related Post

Leave a Reply

Your email address will not be published. Required fields are marked *