ಚಿತ್ರದುರ್ಗ, ಜೂ.18 : ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.
ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಮೃತ ರೇಣುಕಾಸ್ವಾಮಿ ಮನೆಗೆ ಸರ್ಕಾರದ ಪರವಾಗಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಎರಡು ಲಕ್ಷ ರೂಪಾಯಿ ಹಣ ಧನಸಹಾಯ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಸುಧಾಕರ್ ಅವರು, ಬೆಂಗಳೂರಿನಲ್ಲಿ ಹತ್ಯೆಯಾದ ರೇಣುಕಾ ಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿದ್ದೇನೆ. ಸರ್ಕಾರ ಸರ್ಕಾರದ ಪರವಾಗಿ ಕುಟುಂಬಕ್ಕೆ ಧೈರ್ಯ ಹೇಳಿದ್ದೇನೆ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಕುಟುಂಬಕ್ಕೆ ವೈಯಕ್ತಿಕವಾಗಿ ಆರ್ಥಿಕ ಧನ ಸಹಾಯ ಮಾಡಿದ್ದೇನೆ ಎಂದರು.
ರೇಣುಕಾ ಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ಸರ್ಕಾರ ಖಂಡಿತವಾಗಿಯೂ ಸಹಾನುಭೂತಿ ರೀತಿಯಲ್ಲಿ ತೀರ್ಮಾನ ಮಾಡಲಾಗುತ್ತದೆ. ರೇಣುಕಾ ಸ್ವಾಮಿಯ ಮನೆ ಅವರ ಜೊತೆ ಸರಕಾರ ಇರುತ್ತದೆ. ಗೃಹ ಸಚಿವರು ಸಹ ಇಂದು ಭೇಟಿ ನೀಡಲಿದ್ದಾರೆ ಈಗ ಸಿಎಂ ಪರವಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ನನ್ನನ್ನು ಕಳಿಸಿದ್ದಾರೆ. ಸಮಯ ಬಂದಾಗ ಅವರು ಕೂಡ ಮನೆಗೆ ಭೇಟಿ ನೀಡಿದ್ದಾರೆ. ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.