Breaking
Mon. Dec 23rd, 2024
ಚಿತ್ರದುರ್ಗ  :  ಜಿಲ್ಲೆಯಲ್ಲಿ ಯೋಗ ದಿನಾಚರಣೆಯ ಅಂಗವಾಗಿ ಇಂದು ನಗರದ ಬೀದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿ ಕೊಂಡಿದ್ದರು. ಇದರ ಜೊತೆಗೆ ದೇಹದಲ್ಲಿ ಆರೋಗ್ಯ ಮನಸ್ಸು ಸದೃಢ ವಾಗಿರಬೇಕು ಮನಸ್ಸಿನಲ್ಲಿ ಗುರಿಯನ್ನು ಹೊಂದಿರಬೇಕು. ನಮ್ಮ ಸಮಯವನ್ನು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಹಾಗೂ ಇದರ ಜೊತೆಗೆ ಯೋಗವನ್ನು ರೂಡಿಸಿಕೊಂಡು ಪ್ರತಿನಿತ್ಯ ಅಭ್ಯಾಸ ಮಾಡಬೇಕು. ಮನುಷ್ಯ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಲು ಯೋಗ ಅತಿ ಮುಖ್ಯವಾಗಿದೆ.  ಶ್ರೀ ಮುರುಘರಾಜೇಂದ್ರ  ಬೃಹನ್ ಮಠ ವತಿಯಿಂದ ನಡೆದ ಯೋಗ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗವಹಿಸಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು.

ಶ್ರೀ ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಮಾತನಾಡಿ, ಆರೋಗ್ಯಪೂರ್ಣ ಮನಸ್ಸಿದ್ದರೆ ಪ್ರಬುದ್ಧ ಸಮಾಜ ನಿರ್ಮಿಸಲು ಸಾಧ್ಯ. ಕಳೆದ ಕೆಲವು ವರ್ಷಗಳಿಂದ ಯೋಗದ ಬಗ್ಗೆ ವಿಶ್ವವ್ಯಾಪಿ ವ್ಯಾಪಕ ಚರ್ಚೆಯಾಗುತ್ತಿದೆ. ಇದು ಪ್ರಪಂಚದಾದ್ಯಂತ ಹರಡಿದೆ. ಯೋಗವೆಂದರೆ ದೇಹವನ್ನು ಬಗ್ಗಿಸುವುದು ಅಥವಾ ತಿರುಗಿಸುವುದು ಮತ್ತು ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಮಾತ್ರವಲ್ಲ.
ನಮ್ಮ ವಾಸ್ತವವನ್ನು ನೋಡುವ ಮತ್ತು ಅನುಭವಿಸುವ ಸ್ಥಿತಿಗೆ ನಮ್ಮನ್ನು ತರಲು ಇದೊಂದು ವಿಧಾನವಾಗಿದೆ. ನಮ್ಮ ಶಕ್ತಿಗಳ ಉತ್ಕøಷ್ಟ ಭಾವ ಪರವಶವಾಗಲು ನಮ್ಮನ್ನು ಸಕ್ರಿಯಗೊಳಿಸಬೇಕು. ಆಗ ನಮ್ಮ ಸಂವೇದನಾಶೀಲವು ವಿಸ್ತಾರವಾಗುತ್ತದೆ. ಯೋಗವು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಆತಂಕ, ಹೃದಯಸಂಬಂಧಿ ಕಾಯಿಲೆಗಳ ಆಪಾಯವನ್ನು ಕಡಿಮೆ ಮಾಡುತ್ತದೆ. ದೇಹ ಮತ್ತು ಮನಸ್ಸಿನ ನಡುವೆ ಸಾಮರಸ್ಯವನ್ನು ಆದರ್ಶೀಕರಿಸುವಲ್ಲಿ ಯೋಗವು ನೆರವಾಗುತ್ತದೆ ಎಂದರು. 
ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಪ್ರಪಂಚಕ್ಕೆ ಮಾದರಿಯಾದುದು ಈ ಯೋಗ. ಪ್ರಪಂಚದಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಪೂಜ್ಯರ ನೇತೃತ್ವದಲ್ಲಿ ಯೋಗ ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದು ನನ್ನ ಪುಣ್ಯ. ಉತ್ತಮ ಆರೋಗ್ಯಕ್ಕಾಗಿ ಯೋಗ ಮತ್ತು ನಡಿಗೆ ಮಾಡಬೇಕು. ಇಂತಹ ಜಾಗೃತಿ ಕಾರ್ಯಕ್ರಮಗಳು ಇತರರಿಗೆ ಪ್ರೇರಣೆ ಆಗಿದೆ ಎಂದರು.  ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಯೋಗ ಭಾರತದ ಸಂಸ್ಕøತಿಯ ಪ್ರತೀಕ. ದೇಹ ಮತ್ತು ಮನಸ್ಸು ಒಂದಾಗುವ ಪ್ರಕ್ರಿಯೆಯೇ ಯೋಗ. ಅದಕ್ಕೆ ಇಂದಿನ ಯೋಗ ನಡಿಗೆಯೇ ಸಾಕ್ಷಿ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜಪೀರ್ ಮಾತನಾಡಿ, ಯೋಗ ಒಂದು ದಿನಕ್ಕೆ ಸೀಮಿತ ಆಗಬಾರದು. ನಿತ್ಯವೂ ಇಂತಹ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು. ನಮ್ಮ ಆರೋಗ್ಯ ನಮ್ಮ ಕೈಲಿದೆ. ಚಟಗಳು ನಮ್ಮನ್ನು ಅನಾರೋಗ್ಯದ ಕಂದಕಕ್ಕೆ ತಳ್ಳುತ್ತವೆ. ಎಲ್ಲರೂ ದುಶ್ಚಟಗಳಿಂದ ದೂರವಿರಬೇಕು. ಇದು ಕುಟುಂಬಕ್ಕೆ ಮತ್ತು ಸಮಾಜಕ್ಕೆ ಒಳ್ಳೆಯದು ಎಂದರು.  ಕೆಡಿಪಿ ಸದಸ್ಯ ಕೆ.ಸಿ. ನಾಗರಾಜು ಮಾತನಾಡಿದರು.
ಇದಕ್ಕು ಮುನ್ನ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ಪೂರ್ವಭಾವಿಯಾಗಿ ಆಯೋಜಿಸಿದ್ದ ಯೋಗ ನಡಿಗೆ (ಜಾಥಾ)ಯನ್ನು ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮಿಗಳು ನಗಾರಿ ಬಾರಿಸುವುದರ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು ಗುರುಮಠಕಲ್, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮಿಗಳು, ಶ್ರೀ ಬಸವನಾಗಿದೇವ ಸ್ವಾಮಿಗಳು, ಶ್ರೀ ಶಿವಾನಂದ ಸ್ವಾಮಿಗಳು ಸಾಯಿಗಾಂವ, ಶ್ರೀ ಇಮ್ಮಡಿ ಬಸವ ಕೇತೇಶ್ವರ ಸ್ವಾಮಿಗಳು, ಶ್ರೀ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮಿಗಳು ಬಳ್ಳೆಕಟ್ಟೆ, ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮಿಗಳು ತೆಲಸಂಗ, ಶ್ರೀ ತಿಪ್ಪೇರುದ್ರ ಸ್ವಾಮಿಗಳು, ಸಂಸದ ಗೋವಿಂದ ಎಂ.ಕಾರಜೋಳ, ನಗರಸಭೆ ಆಯುಕ್ತರಾದ ಶ್ರೀಮತಿ ರೇಣುಕ, ಕೆಇಬಿ ಷಣ್ಮುಖಪ್ಪ, ಸುರೇಶ್‍ಬಾಬು, ಸಿದ್ದವ್ವನಹಳ್ಳಿ ಪರಮೇಶ್, ಡಿ.ಎಸ್. ಮಲ್ಲಿಕಾರ್ಜುನ್, ಪಿ.ವೀರೇಂದ್ರಕುಮಾರ್, ರಾಜಕೀಯ ಧುರೀಣರು, ಅಧಿಕಾರಿಗಳು, ವಿವಿಧ ಸಮಾಜಗಳು ಸಂಘಸಂಸ್ಥೆಗಳ ಮುಖಂಡರು, ಶ್ರೀಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಶಾಲಾ-ಕಾಲೇಜುಗಳ ನೌಕರ ವರ್ಗದವರು, ಸಹಸ್ರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜಾಥಾವು ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಬೆಳಗ್ಗೆ 7.30ಕ್ಕೆ ಆರಂಭಗೊಂಡು ಒನಕೆಓಬವ್ವ ಸರ್ಕಲ್‍ನಲ್ಲಿ ಸಮಾಪ್ತಿಗೊಂಡಿತು. ಜಾಥಾಕ್ಕೆ ಬಂದ ಸಕಲರಿಗೂ ಶ್ರೀಮಠದಿಂದ ಡಿ.ಸಿ. ಆಫೀಸ್ ಸರ್ಕಲ್‍ನಲ್ಲಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Related Post

Leave a Reply

Your email address will not be published. Required fields are marked *