ಚಿತ್ರದುರ್ಗ : ತಾಲ್ಲೂಕು ಹಿರೇಗುಂಟನೂರು ಹೋಬಳಿ ಆಲಘಟ್ಟ ಗ್ರಾ.ಪಂ ವ್ಯಾಪ್ತಿಯ ಚಿಕ್ಕಾಲಘಟ್ಟ ಗ್ರಾಮದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಲಾದ “ತಾಲ್ಲೂಕು ಮಟ್ಟದ ಜನ ಸ್ಪಂದನಾ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ಶೀಘ್ರದಲ್ಲೇ ಶುದ್ಧ ನೀರಿನ ಘಟಕವನ್ನು ಸ್ಥಾಪಿಸಿ, ಕಾರ್ಯಾರಂಭ ಮಾಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ನೀಡಿದರು.
ಚಿತ್ರದುರ್ಗ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 158 ಹಳ್ಳಿಗಳಿಗೆ ಮಾರಿ ಕಣಿವೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆ ವ್ಯಾಪ್ತಿಯಲ್ಲಿ ಚಿಕ್ಕಾಲಘಟ್ಟ ಗ್ರಾಮ ಸೇರ್ಪಡೆಯಾಗಿರಲಿಲ್ಲ. ತದನಂತರದಲ್ಲಿ ಒತ್ತಾಯಪೂರ್ವಕವಾಗಿ ಚಿಕ್ಕಾಲಘಟ್ಟ ಗ್ರಾಮವನ್ನೂ ಯೋಜನಾ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಂಡಿದ್ದೇನೆ.
ಗ್ರಾಮದ ಸರ್ಕಾರಿ ಶಾಲೆ ಮುಚ್ಚುವ ಹಂತದಲ್ಲಿತ್ತು. ಇದನ್ನು ತಪ್ಪಿಸಿ ಶಾಲೆಯನ್ನು ಉಳಿಸಲಾಗಿದೆ. ಚಿಕ್ಕಾಲಘಟ್ಟ ಗ್ರಾಮವನ್ನು ಗಣಿ ಭಾದಿತ ಪ್ರದೇಶದ ವ್ಯಾಪ್ತಿಗೆ ಸೇರಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ. ಇದನ್ನು ಆದ್ಯತೆಯಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಮನೆಗಳು ಮಂಜೂರಾಗಲಿವೆ. ಗ್ರಾಮ ಸಭೆ ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚುವ ಕಾರ್ಯ ಮಾಡಲಾಗುವುದು ಎಂದು ಶಾಸಕ ವೀರೇಂದ್ರ ಪಪ್ಪಿ