ಚಿತ್ರದುರ್ಗ, ಜೂನ್. 19 : ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿ, ಆಲಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಾಲಘಟ್ಟ ಗ್ರಾಮದಲ್ಲಿ ಬುಧವಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಲಾದ “ತಾಲ್ಲೂಕು ಮಟ್ಟದ ಜನ ಸ್ಪಂದನಾ” ಕಾರ್ಯಕ್ರಮದಲ್ಲಿ ಶಾಸಕ ವಿರೇಂದ್ರ ಪಪ್ಪಿ ಭಾಗವಹಿಸಿದ್ದರು.
ಲೋಕಸಭೆ ಚುನಾವಣೆ ನಂತರ ಆಯೋಜಿಸಲಾದ ಜನ ಸ್ಪಂದನ ಕಾರ್ಯಕ್ರಮಕ್ಕೆ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಗ್ರಾಮಕ್ಕೆ ಆಗಮಿಸಿದ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಹಸಿರು ತೋರಣದಿಂದ ಅಲಂಕೃತಗೊಂಡ ಜೋಡೆತ್ತಿನ ಬಂಡಿಯ ಮೇಲೆ ಗ್ರಾಮಕ್ಕೆ ಕರೆತರಲಾಯಿತು. ಪೂರ್ಣಕುಂಬ ಹೊತ್ತ ಅಂಗನಾಡಿ ಕಾರ್ಯಕರ್ತೆಯರು ಸ್ವಾಗತಕೋರಿದರು. ಮೆರವಣಿಗೆಯಲ್ಲಿ ತಹಶೀಲ್ದಾರ ಡಾ.ನಾಗವೇಣಿ, ತಾ.ಪಂ.ಇ.ಓ ಎಚ್.ಹನುಮಂತಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.