ಪಶುಪಾಲನೆ ಮತ್ತು ವೈದ್ಯಕೀಯ ಸೇವಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ಇದ್ದು ಶೀಘ್ರವಾಗಿ ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಶು ವೈದ್ಯಕೀಯ ಹುದ್ದೆ ಗಳಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಪದವೀಧರರು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಈ ಹುದ್ದೆಗೆ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್ಗಳು ಮೀಸಲಿಡಲಾಗಿದೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52640 ಮಾಸಿಕ ವೇತನ ದೊರೆಯಲಿದೆ.
ಯಾವುದೇ ಅಂಗೀಕೃತ ಪಶು ವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವವಿದ್ಯಾನಿಲಯ ತೇರ್ಗಡೆ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಮತ್ತು ಬಿ.ವಿ.ಎಸ್.ಸಿ / ಬಿ.ವಿ.ಎಸ್.ಸಿ ಆ್ಯಂಡ್ ಎಎಹ್ ಪದವಿ ಪಡೆದಿರಬೇಕೆಂದು ಅದೇ ಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಇದೆ ಪ್ರವರ್ಗ 2a, 2ಬಿ, ಪ್ರವರ್ಗ 3a ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ರ ಅಭ್ಯರ್ಥಿಗಳಿಗೆ 5 ವರ್ಷ ರಿಯಾಯಿತಿ ಇದೆ.
ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 14ರಿಂದ ಜೂನ್ 24ರ ವರೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿರುತ್ತದೆ. ಏನೇ ಮಕಾತಿಯೂ ಗುತ್ತಿಗೆ ಆಧಾರದ ಮೇಲೆ ನಡೆಯಲಿ ಇರುತ್ತದೆ ಇದು ತಾತ್ಕಾಲಿಕ ಹುದ್ದೆಯಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಮತ್ತು ಕರ್ನಾಟಕದಲ್ಲಿ ಕಡ್ಡಾಯವಾಗಿ ವಾಸವಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ಸೈಟ್ ಅನ್ನು ಸಂಪರ್ಕಿಸಲು ಇಲಾಖೆಯ ಕೋರಿದೆ www.ahvs.karnataka.gov.in