ಬೆಂಗಳೂರು : ವಿಧಾನಸೌಧದ ದ್ವಾರದ ಮಧ್ಯ ಭಾಗದಲ್ಲಿ ನಿರ್ಮಾಣ ಆಗಿರುವ ಭುವನೇಶ್ವರಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯಶ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮೊದಲಾದವರು ಭಾಗವಹಿಸಿದ್ದರು .
ವಿಧಾನಸೌಧದ ಶಿಲ್ಪಿ ಕೆ. ಶ್ರೀಧರ್ ಮೂರ್ತಿ ನಿರ್ಮಾಣ ಮಾಡಲಿದ್ದಾರೆ, ಭುವನೇಶ್ವರಿ ಪ್ರತಿಮೆ 31 ಟನ್ ತೂಕ ಹೊಂದಿದ್ದು, ಅಂದಾಜು 21. 24 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.
ನವೆಂಬರ್ 1, 2013ಕ್ಕೆ ಕರ್ನಾಟಕ ಎಂಬ ಹೆಸರು 50 ವರ್ಷ ಕಳೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ನಿರ್ಧಾರ ಮಾಡಿದೆ.
4 ತಿಂಗಳ ಒಳಗೆ ಪ್ರತಿಮೆ ನಿರ್ಮಾಣ ಮಾಡಿ ಮುಗಿಸಲು ಡೆಡ್‌ಲೈನ್ ವಿಧಿಸಲಾಗಿದೆ, ಈ ವರ್ಷದ ಕನ್ನಡ ರಾಜ್ಯೋತ್ಸವದಂದು ಪ್ರತಿಮೆ ಲೋಕಾರ್ಪಣೆಯಾಗಲಿದೆ.