ಚಿತ್ರದುರ್ಗ : ಜಿಲ್ಲಾ ಆಸ್ಪತ್ರೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 23 ನರ್ಸ್, ಜೂನಿಯರ್ ಲ್ಯಾಬೊರೇಟರಿ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಜೂನ್ 21, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ :
ನರ್ಸ್- 18
ಜೂನಿಯರ್ ಲ್ಯಾಬೊರೇಟರಿ ಟೆಕ್ನಿಷಿಯನ್-4
ಫಾರ್ಮಾಸಿಸ್ಟ್- 1
ವಿದ್ಯಾರ್ಹತೆ:
ನರ್ಸ್- ಬಿ.ಎಸ್ಸಿ, ಜಿಎನ್ಎಂ ನರ್ಸಿಂಗ್
ಜೂನಿಯರ್ ಲ್ಯಾಬೊರೇಟರಿ ಟೆಕ್ನಿಷಿಯನ್- ಡಿಪ್ಲೊಮಾ, ಲ್ಯಾಬ್ ಟೆಕ್ನಿಷಿಯನ್ನಲ್ಲಿ ಬಿ.ಎಸ್ಸಿ
ಫಾರ್ಮಾಸಿಸ್ಟ್- ಡಿ.ಫಾರ್ಮಾ, ಬಿ.ಫಾರ್ಮಾ
ಅನುಭವ : ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು.
ವಯೋಮಿತಿ : ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.
ವೇತನ : ಮಾಸಿಕ ₹ 16,839
ಉದ್ಯೋಗದ ಸ್ಥಳ : ಚಿತ್ರದುರ್ಗ
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಆಸ್ಪತ್ರೆಯ ಕಚೇರಿ ಚಿತ್ರದುರ್ಗ ಕರ್ನಾಟಕ