Breaking
Mon. Dec 23rd, 2024

ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟನೆ…..!

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಕರ್ನಾಟಕ ಸರ್ಕಾರ ಶನಿವಾರ ಕ್ರಮವಾಗಿ ಶೇ 3.9 ಹಾಗೂ ಶೇ 4.1ರಷ್ಟು ಹೆಚ್ಚಾಗಿದೆ. ಇದರಿಂದ ಪೆಟ್ರೋಲ್ ಬೆಲೆ ಲೀಟರ್‌ಗೆ ಸುಮಾರ 3 ರೂ. ಹಾಗೂ ಡಿಸೇಲ್ ಬೆಲೆ ಸುಮಾರು 3.50 ರೂಪಾಯಿಯಾಗಿದೆ.

ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ನಾಯಕರು, ಕಾರ್ಯಕರ್ತರು ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಹಾಗೂ ಸೈಕಲ್ ಜಾಥಾ ಹಮ್ಮಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ ಹಾಗೂ ಕಾರು ಬಿಟ್ಟು ಸೈಕಲ್ ಏರಿ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಬಿಜೆಪಿ ನಾಯಕನನ್ನು ಬಂಧಿಸಲಾಯಿತು.

ಕಲಬುರಗಿಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ದಾವಣಗೆರೆಯಲ್ಲಿ ಮಾಜಿ ಸಿಎಂ ಸಂಸದ ಬೊಮ್ಮಾಯಿ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ, ಮೈಸೂರಿನಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ನೇತೃತ್ವದಲ್ಲಿ, ಬೀದರ್‌ನಲ್ಲಿ ಮಾಜಿ ಸಚಿವ ಪ್ರಭು ಚೌಹಾಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೆಳಗಾವಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಉಳಿದಂತೆ ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ರಾಯಚೂರು, ಮಂಡ್ಯ, ಮಂಗಳೂರು ಸೇರಿ ಹಲವೆಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Related Post

Leave a Reply

Your email address will not be published. Required fields are marked *