Breaking
Mon. Dec 23rd, 2024

ಡಿ ಗ್ಯಾಂಗ್’ ಹೆಸರಿನ ನೊಂದಣಿಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅರ್ಜಿ ಸಲ್ಲಿಕೆ….!

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಸಹಚರರು ಜೈಲು ಪಾಲಾಗಿದ್ದಾರೆ, ಈ ಬಗ್ಗೆ ವರದಿ ಮಾಡುತ್ತಿರುವ ಮಾಧ್ಯಮಗಳು ದರ್ಶನ್ ಹಾಗೂ ಸಹಚರರನ್ನು ‘ಡಿ ಗ್ಯಾಂಗ್’ ಎಂದು ಸಂಭೋಧಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿಯೂ ‘ಡಿ ಗ್ಯಾಂಗ್’ ಹೆಸರಿನ ಬಳಕೆ ಜೋರಾಗಿದೆ. ಈಗ ಚಿತ್ರತಂಡವೊಂದು ‘ಡಿ ಗ್ಯಾಂಗ್’ ಹೆಸರು ನೋಂದಾವಣಿಗೆ ಫಿಲಂ ಚೇಂಬರ್‌ಗೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಆ ಹೆಸರನ್ನು ನೀಡಲು ಸಾಧ್ಯವಿಲ್ಲವೆಂದು ಚೇಂಬರ್ ಹೇಳಿದೆ. 

ಪಿಎಂ ಫಿಲಮ್ಸ್ ನಿರ್ಮಾಣ ಸಂಸ್ಥೆಯ ಮಂಜು ಎನ್ ನಾಯಕ್ ಎಂಬುವರು ‘ಡಿ ಗ್ಯಾಂಗ್’ ಹೆಸರಿನ ನೊಂದಣಿಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಹೆಸರನ್ನು ನೀಡಲು ಸಾಧ್ಯವಿಲ್ಲವೆಂದು ವಾಣಿಜ್ಯ ಮಂಡಳಿ ಹೇಳಿದೆ ಎಂದು ಅವರು ಫೇಸ್ಬುಕ್ ಪೋಸ್ಟ್ ಮೂಲಕ. ಜೊತೆಗೆ ಏಕೆ ಹೆಸರು ನೀಡಲು ಸಾಧ್ಯವಿಲ್ಲ ಎಂಬುದಕ್ಕೆ ಸ್ಪಷ್ಟ ಕಾರಣವನ್ನು ಸಹ ಮಂಡಳಿ ನೀಡಿಲ್ಲವೆಂದು ಆರೋಪಿಸಿದ್ದಾರೆ. 

‘ಡಿ ಗ್ಯಾಂಗ್’ ಎಂಬ ಹೆಸರಿಗಾಗಿ ಫಿಲ್ಮ್ ಛೇಂಬರ್ ನಲ್ಲಿ ವಿಚಾರಿಸಿದಾಗ ಈ ಹೆಸರಿನ ಟೈಟಲ್ ಅನ್ನು ಯಾರು ಕೂಡ ನೊಂದಣಿ ಮಾಡಿರಲಿಲ್ಲ. ನಾವು ಈ ಟೈಟಲ್ ನ ಮೇಲೆ ಸುಮಾರು ಎರಡು ವರ್ಷಗಳಿಂದ ಕೆಲಸ ಮಾಡಿದ್ದೇವೆ. ಅದಕ್ಕೆ ಸಾಕ್ಷಿಯಾಗಿ ಯೂಟ್ಯೂಬ್ ನಲ್ಲಿ ‘ಡಿ ಗ್ಯಾಂಗ್’ ಎಂಬ ಹಾಡು ಬಿಡುಗಡೆಯಾಗಿದೆ. ಈಗ ನಡೆಯುತ್ತಿರುವ ದರ್ಶನ್ ಅವರ ಪ್ರಕರಣಕ್ಕೂ ನಮ್ಮ ಟೈಟಲ್‌ಗೂ ಯಾವುದೇ ಸಂಬಂಧವಿಲ್ಲ.

ಆದರೆ ನಮ್ಮ ಟೈಟಲ್ ಅನ್ನು ಯಾವ ಕಾರಣಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಅವರು ನೊಂದಣಿ ಮಾಡಿಕೊಳ್ಳುವುದಿಲ್ಲ ಎಂದು ನನಗೆ ಅರ್ಥವಾಗಲಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡ ನಿರ್ಮಾಪಕರಿಗೆ ಅಥವಾ ದೊಡ್ಡ ನಿರ್ದೇಶಕರಿಗೆ ಈ ಟೈಟಲ್ ಕೊಟ್ಟರೆ. ಆಗ ಮಾತನಾಡಲು ಸಾಕ್ಷಿ ಬೇಕು ಎಂಬ ಕಾರಣಕ್ಕೆ ಈ ವಿಷಯವನ್ನು ತಿಳಿಸಲು ಇಷ್ಟಪಡುತ್ತೇನೆ’ ಎಂದು ‘ಡಿ ಗ್ಯಾಂಗ್’ ಸಿನಿಮಾವನ್ನು ನಿರ್ದೇಶಿಸಲು ಬಯಸಿರುವ ರಾಖಿ ಸೊಮ್ಲಿ ಎಂಬವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. 

ದರ್ಶನ್ ಕುರಿತು ಈಗ ನಡೆಯುತ್ತಿರುವ ಘಟನೆಗಳಿಗೂ ಅವರ ಸಿನಿಮಾಕ್ಕೂ ಸಂಬಂಧವಿಲ್ಲ. ಅವರ ಸಿನಿಮಾದ ಕತೆಣುಕಾ ಸ್ವಾಮಿ ಕೊಲೆಯನ್ನು ಆಧರಿಸಿದ್ದಲ್ಲ. ಆದರೂ ಸಹ ಮಂಡಳಿಯವರು ಸಿನಿಮಾ ಟೈಟಲ್ ನೀಡಲು ನಿರಾಕರಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಯಲು ಕಾರಣ ಶೀರ್ಷಿಕೆ ನೀಡಿಲ್ಲ ಎಂದು ಹೇಳಿದ್ದಾರಂತೆ ಅಧ್ಯಕ್ಷರು.

Related Post

Leave a Reply

Your email address will not be published. Required fields are marked *