ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಫಕೀರಪ್ಪ ಹರಿಶ್ಚಂದ್ರ ಲಮಾಣಿ ಅವರು ನೂತನವಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲಾ ನೀರಾವರಿ ಹೋರಾಟದ ಪದಾಧಿಕಾರಿಗಳೊಂದಿಗೆ ಮಾತನಾಡಿದ ಅವರು ವಿಶ್ವೇಶ್ವರಯ್ಯ ನೀರಾವರಿ ನಿಗಮದ ಮೂಲಕ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆಯಲಾಗಿದೆ.
ಲೋಕಸಭೆ ಸದಸ್ಯ ಗೋವಿಂದ ಕಾರಜೋಳ ಕೂಡ ಈ ಸಂಬಂಧ ಪ್ರತ್ಯೇಕ ಪತ್ರ ಬರೆದು ಕೇಂದ್ರದ ಮೇಲೆ ಒತ್ತಡ ಹೇರಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಂಚಯಿನಿ ಯೋಜನೆ ಅಥವಾ ಐಬಿಪಿ ಯಾವುದರಲ್ಲದ ಅನುದಾನವನ್ನು ಒದಗಿಸುವಂತೆ ವಿನಂತಿಸಲಾಗಿದೆ.
ಭದ್ರಾ ಮೇಲ್ದಂಡೆ ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಏತ ನೀರಾವರಿ ಯೋಜನೆಯಾಗಿದೆ. ತುಂಗಾದಿಂದ ಭದ್ರಾಗೆ ಮೊದಲ ಹಂತದಲ್ಲಿ 17.40 ಟಿಎಂಸಿ ನೀರು ಮತ್ತು ಭದ್ರಾ ಜಲಾಶಯದಿಂದ ಎರಡನೇ ಹಂತದಲ್ಲಿ 29.90 ಟಿಎಂಸಿ ನೀರನ್ನು ಎತ್ತುವ ಮೂಲಕ ಬರಪೀಡಿತ ಜಿಲ್ಲೆಗಳಾದ ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ಚಿತ್ರದುರ್ಗದ ಸೂಕ್ಷ್ಮ ನೀರಾವರಿ ಮೂಲಕ 2,25,515 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸಲು ಯೋಜಿಸಲಾಗಿದೆ. ಬರಪೀಡಿತ 367 ಕೆರೆಗಳನ್ನು ತುಂಬಿಸುವ ಮೂಲಕ ಕುಡಿವ ನೀರನ್ನು ಒದಗಿಸಲಾಗುತ್ತಿದೆ ಎಂಬ ಸಂಗತಿಯ ಪತ್ರದಲ್ಲಿ ವಿವರಿಸಲಾಗಿದೆ.
ಭದ್ರಾ ಮೇಲ್ದಂಡೆಯ ರಾಷ್ಟ್ರೀಯ ಯೋಜನೆಯಾಗಿ ಪ್ರಕಟಿಸುವ ಸಂಬಂಧದ ಎಲ್ಲ ಪೂರ್ವ ಸಿದ್ದತೆಗಳನ್ನು ಪೂರ್ಣಗೊಳಿಸಿ ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ. 16-12-2020 ರಲ್ಲಿ ರೂ.21,473 ಕೋಟಿ ವೆಚ್ಚದ ಪರಿಷ್ಕೃತ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ ಯೋಜನೆ ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತೆಯನ್ನು ಅಂಗೀಕರಿಸಲಾಗಿದೆ. 24.12.2020 ರಂದು ನಡೆದ ಕೇಂದ್ರ ಜಲ ಶಕ್ತಿ ಸಚಿವಾಲಯದ ಸಲಹಾ ಸಮಿತಿ ಸಭೆ, 25-03-2021 ರಂದು ಹೂಡಿಕೆ ಕ್ಲಿಯರೆನ್ಸ್ ಸಮಿತಿ ಸಭೆಯಲ್ಲಿ ರು.16,125.48 ಕೋಟಿ ಮೊತ್ತದ ಭದ್ರಾ ಮೇಲ್ದಂಡೆ ಯೋಜನೆ ಹೂಡಿಕೆ ತೆರವು ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ.
ಜಲ ಶಕ್ತಿ ಸಚಿವಾಲಯ ಹೊರಡಿಸಿದ ರಾಷ್ಟ್ರೀಯ ಯೋಜನೆಯ ಅನುಷ್ಠಾನದ ಮಾರ್ಗಸೂಚಿಗಳ ಪ್ರಕಾರ, ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಲ್ಲಿ ಸೇರ್ಪಡೆಗೊಳ್ಳಲು ಅರ್ಹವಾಗಿದೆ. 15-02-2022 ರಂದು ನಡೆದ ಹೈಪವರ್ಡ್ ಸ್ಟೀರಿಂಗ್ ಸಮಿತಿ (ಎಚ್‌ಪಿಎಸ್‌ಸಿ) ಸಭೆಯ ಮುಂದೆ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಸೇರಿಸುವ ಪ್ರಸ್ತಾವನೆಯನ್ನು ಇರಿಸಲಾಗಿದೆ.
ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್, ಪ್ರಗತಿಪರ ಚಿಂತಕ ಯಾದವರೆಡ್ಡಿ ಜೆ. ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ, ಸಮಿತಿ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಈ ವೇಳೆ.