ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದೆಹಲಿಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. 2014ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ. ಮೈಸೂರಿನ ಅರಮನೆ ಮೈದಾನದಲ್ಲೂ ಮೋದಿ ಯೋಗ ಮಾಡಿದರು.
ಯೋಗಕ್ಕೆ ಪ್ರಧಾನಿಗಳ ಪ್ರೊತ್ಸಾಹ ಹೆಚ್ಚು. ಇದರಿಂದಾಗಿ ಹೆಚ್ಚು ಪ್ರಚಾರ ದೊರೆತಿದೆ. ಯೋಗ ಕಾಯಿಲೆಗಳಿಂದ ಸ್ವಲ್ಪ ಮುಕ್ತಿ ನೀಡುತ್ತದೆ. ಆರೋಗ್ಯವಂತವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು. ಕಾಶ್ಮೀರದಲ್ಲಿ ಮೋದಿ ಯೋಗ ಮಾಡುತ್ತಿರುವುದು ಒಳ್ಳೆಯ ಸಂದೇಶ ಎಂದು ಕುಮಾರಸ್ವಾಮಿ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಕರ್ನಾಟದಲ್ಲಿ ಕಾಂಗ್ರೆಸ್ ಕಡಿಮೆ ಸೀಟು ಬರಲು ಇವಿಎಂ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದರು. ಕರ್ನಾಟಕದ ಲೋಕಸಭಾ ಫಲಿತಾಂಶಕ್ಕೆ ಇವಿಎಂ ಕಾರಣವಾದರೆ, 2023 ರ ವಿಧಾನಸಭೆ ವಿಧಾನ ಸಭೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗೆದ್ದಿತ್ತಲ್ಲ, ಆಗ ಇವಿಎಂ ದೋಷವಿತ್ತಾ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಅವರು ಟಾಂಗ್ ನೀಡಿದರು.