Breaking
Mon. Dec 23rd, 2024

ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಎಚ್ಚರಿಕೆ…!

ಬೆಂಗಳೂರು : ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳೇ ನೇರಹೊಣೆ ವಹಿಸಿದ್ದಾರೆ. ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಎಚ್ಚರಿಕೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಇಲಾಖೆಯ ಯೋಜನೆಗಳ ಜಿಲ್ಲಾವಾರು ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು.

ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುತ್ತಿರುವ ಎಂಎಸ್ಪಿಸಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಪೋಷಣ್ ಯೋಜನೆಯಡಿ ಹೆಚ್ಚು ಮಕ್ಕಳನ್ನು ನೋಂದಾಯಿಸಲು ತ್ವರಿತ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಮಳೆಗಾಲದ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ಹೊಂದಿಕೆಯಾಗಬೇಕು. ಟಿಸಿ, ಮರ, ಗಿಡಗಳಿದ್ದರೆ ಇರಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಸಂಯೋಜನಾಧಿಕಾರಿಗಳು (ಸಿಡಿಪಿಒ), ಪರಿವೀಕ್ಷಣಾ ಅಧಿಕಾರಿಗಳು ಸಮನ್ವಯ ಸಾಧಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ಬಿಡುಗಡೆ : ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತರಿಗೆ ಆರ್ಥಿಕವಾಗಿ ನೆರವಾಗಲಿದೆ. 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.

ಬಾಲ್ಯ ವಿವಾಹ ತಡೆಗಟ್ಟುವ ಕ್ರಮ : ಗ್ರಾಮಾಂತರ ಭಾಗದಲ್ಲಿ ಆಗುತ್ತಿರುವ ಬಾಲ್ಯವಿವಾಹ ತಡೆಗಟ್ಟಲು ತೆಗೆದುಕೊಂಡಿರುವ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಇನ್ಮುಂದೆ ಬಾಲ್ಯ ವಿವಾಹ ಆಗದಂತೆ ಎಚ್ಚರಿಕೆ ವಹಿಸಬೇಕು.

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಸೇರಿದಂತೆ ಜಿಲ್ಲಾ ಉಪ ನಿರ್ದೇಶಕರು ಸಭೆಯಲ್ಲಿ ಇತರರು ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *