ಚಿತ್ರದುರ್ಗ : ಜಿ.ಹೆಚ್. ತಿಪ್ಪಾರೆಡ್ಡಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದರು. ಹಾಗೂ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಗಳ ಹಗರಣ ನಡೆದಿದ್ದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜಿನಾಮೆಯನ್ನು ನೀಡುವಂತೆ ಜೂನ್ 28 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಗಳನ್ನು ಆಂಧ್ರದ ಚುನಾವಣೆಗೆ ಸಾಗಿಸಲಾಗಿದೆ. ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ರಾಜ್ಯದಿಂದ ಅನೇಕ ಕಾರ್ಯಕ್ರಮಗಳು ಆಗಮಿಸಲಿವೆ, ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ ಇವರುಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
ಬಿಜೆಪಿ.ಮುಖಂಡರುಗಳಾದ ಕೆ.ಟಿ.ಕುಮಾರಸ್ವಾಮಿ, ಎಸ್ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಶಿವಣ್ಣ, ದೇವರಾಜ್ ಹೊಸದುರ್ಗ, ನವೀನ್ ಚಳ್ಳಕೆರೆ, ಎಸ್ಟಿ.ಮೋರ್ಚಾ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.