ಬೆಂಗಳೂರು : ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ರಿಜಿಸ್ಟ್ರೇಷನ್ ಪಡೆದಿರುವ ಅಭ್ಯರ್ಥಿಗಳು ಇಂದಿನಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಟಿಇಟಿ ಪ್ರವೇಶ ಪತ್ರ ಲಿಂಕ್ ಕ್ಲಿಕ್ ಮಾಡಿ, ನಂತರ ತೆರೆಯುವ ವೆಬ್‌ಸೈಟ್‌ನಲ್ಲಿ – ಮತ್ತೊಂದು ವೆಬ್‌ಪೇಜ್ ತೆರೆಯುತ್ತದೆ. ಇಲ್ಲಿ ಅಪ್ಲಿಕೇಶನ್ ನಂಬರ್ ಹಾಗೂ ಜನ್ಮ ದಿನಾಂಕ ಮಾಹಿತಿ ನೀಡಿ ಲಾಗಿನ್ ಆಗುವ ಮೂಲಕ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2024 ದಿನಾಂಕ 30-06-2024 ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್ ವಿಳಾಸ : https://schooleducation.karnataka.gov.in
ಪ್ರವೇಶ ಪತ್ರ ಡೌನ್‌ಲೋಡ್ ವಿಧಾನ
- ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- ತೆರೆದ ವೆಬ್‌ಪೇಜ್‌ನಲ್ಲಿ’KARTET 2024 -Admit Card’ ಗೆ ಸಂಬಂಧಿತ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಮತ್ತೊಂದು ವೆಬ್‌ಪೇಜ್ ತೆರೆಯುತ್ತದೆ. ಇಲ್ಲಿ ಅಪ್ಲಿಕೇಶನ್ ನಂಬರ್ ಹಾಗೂ ಜನ್ಮ ದಿನಾಂಕ ಮಾಹಿತಿ ನೀಡಿ.
- ‘Submit’ ಎಂದಿರುವಲ್ಲಿ ಕ್ಲಿಕ್ ಮಾಡಿ.
- ಪ್ರವೇಶ ಪತ್ರ ಪ್ರದರ್ಶಿತವಾಗುತ್ತದೆ. ಚೆಕ್ ಮಾಡಿಕೊಂಡು, ಡೌನ್‌ಲೋಡ್ ಮಾಡಿಕೊಳ್ಳಿ.
ಶಿಕ್ಷಕರ ಅರ್ಹತಾ ಪರೀಕ್ಷೆ ಪತ್ರಿಕೆ ಕುರಿತು
- ಪತ್ರಿಕೆ-1 : 1 ರಿಂದ 5ನೇ ತರಗತಿ ಬೋಧಿಸಲ್ಪಡುವ ಶಿಕ್ಷಕರಿಗಾಗಿ
- ಪತ್ರಿಕೆ-2 : 6 ರಿಂದ 8ನೇ ತರಗತಿ ಬೋಧಿಸಲ್ಪಡುವ ಶಿಕ್ಷಕರಿಗಾಗಿ.
- ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಪ್ರತಿ ಪ್ರಶ್ನೆಗೆ ಒಂದು ಅಂಕದಂತೆ, ಒಟ್ಟು 150 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
- ತಪ್ಪು ಉತ್ತರಗಳಿಗೆ ನೆಗೆಟಿವ್ ಮೌಲ್ಯಮಾಪನ ಇರುತ್ತದೆ.
ಶಾಲಾ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಡ್ಮಿಟ್ ಕಾರ್ಡ್‌ನಲ್ಲಿ ಸೂಚನೆಗಳನ್ನು ನೀಡಿದ್ದು, ಅದರಂತೆ ಸಿದ್ಧತೆಗಳೊಂದಿಗೆ ಪರೀಕ್ಷೆಗೆ ಹಾಜರಾಗಲು ತಿಳಿಸಿದೆ.
KARTET ಅರ್ಹತಾ ಅಂಕಗಳು ಎಷ್ಟು?
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ.60 ಅರ್ಹತಾ ಅಂಕಗಳನ್ನು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಶೇಷ ಅಗತ್ಯವುಳ್ಳ ಅಭ್ಯರ್ಥಿಗಳು ಕನಿಷ್ಠ ಶೇ.55 ರಷ್ಟು ಅಂಕಗಳನ್ನು ಗಳಿಸಬೇಕು.
ಆಯಾ ಜಿಲ್ಲೆಯ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಮತ್ತು ಪರೀಕ್ಷಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಒಳಗೊಂಡ ಪಟ್ಟಿಯನ್ನೂ ಸಹ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.