ಕಲಬುರ್ಗಿ : ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ದೊಡ್ಡೇಶ್ (40) ವರ್ಷ ಎಂದು ಗುರುತಿಸಲಾಗಿದೆ, ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೋಲಿಸ್ ಪೇದೆಯು ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ದೊಡ್ಡ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ನಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ದೊಡ್ಡೇಶ್ ನೇಣಿಗೆ ಶರಣಾಗಿದ್ದಾರೆ.
ಕಲಬುರಗಿ ನಗರದ ಹೈ ಕೋರ್ಟ್ ಬಳಿ ದೊಡ್ಡೇಶ್ ವಾಸವಿದ್ದರು. ಆದರೀಗ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅವರ ಅಪ್ತರಿಗೆ ಬೇಸರ ತರಿಸಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.