ಬೆಂಗಳೂರು : ರಾಜ್ಯದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಇಲಾಖೆ ದಿನಾಂಕವನ್ನು ಘೋಷಣೆ ಮಾಡಿದೆ ಈಗಾಗಲೇ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಸಂಬಂಧಪಟ್ಟ ಶಾಲೆಗಳಿಗೆ ವಿತರಿಸಲಾಗಿದ್ದು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಪರೀಕ್ಷಾ ಮಂಡಳಿಯು ಮಹತ್ವ ಆದೇಶವನ್ನು ಹೊರಡಿಸಲಾಗಿದೆ.
ಜೂನ್ 24 ರಿಂದ ಆರಂಭವಾಗಲಿದೆ ಈ ಪರೀಕ್ಷೆಗೆ ರಾಜ್ಯಾದ್ಯಂತ 75,995 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯು ಪರೀಕ್ಷೆ ಮೂರು ದಿನಾಂಕ 24 6 2024 ರಿಂದ ಆರಂಭಗೊಂಡ ಪರೀಕ್ಷೆ ದಿನಾಂಕ 0 5 7 2024 ವರೆಗೆ ನಡೆಯಲಿದೆ ಎಂದು ತಿಳಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಕಲಾ ವಿಭಾಗದಲ್ಲಿ 19,113 ವಿದ್ಯಾರ್ಥಿಗಳು 11 698 ವಿದ್ಯಾರ್ಥಿನಿಯರು ಸೇರಿದಂತೆ ರೂ.30, 811 ಮಂದಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ವಿಜ್ಞಾನ ವಿಷಯದಲ್ಲಿ 19,783 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 25401 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 44,358 ಹುಡುಗರು 31 637 ಹುಡುಗಿಯರು ಸೇರಿ ಒಟ್ಟು 75, 995 ವಿದ್ಯಾರ್ಥಿಗಳು ಪರೀಕ್ಷೆ ಮೂರಕ್ಕೆ ನೋಂದಾಯಿಸಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯು ರಾಜ್ಯದಲ್ಲಿ ಒಟ್ಟು 284 ಕ್ಷೇತ್ರಗಳಲ್ಲಿ ನಡೆಯಲಿದೆ ಈ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕಣ್ಗಾವಲು ಅಳವಡಿಸಲಾಗಿದೆ ಮತ್ತು ಅದಲ್ಲದೆ ಜಿಲ್ಲೆ ತಾಲೂಕು ಹಂತದಲ್ಲೇ ವಿಚಕ್ಷಣ ದಳಗಳನ್ನು ರಚಿಸಲಾಗಿದೆ ಎಂದು ಪರೀಕ್ಷಾ ಮಂಡಳಿಯು ತಿಳಿಸಿದೆ.