ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲು ಅರ್ಹ ಅಭ್ಯರ್ಥಿಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸಾರ್ವಜನಿಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಅನೇಕ ಮೆಡಿಕಲ್ ಆಫೀಸರ್,ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಜೂನ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:- ವಿದ್ಯಾರ್ಹತೆ
ಮೆಡಿಕಲ್ ಆಫೀಸರ್- ಎಂಬಿಬಿಎಸ್
ಮಿಡ್ವೈಫ್/ನರ್ಸ್- ಡಿಪ್ಲೊಮಾ, ಬಿ.ಎಸ್ಸಿ
ಲ್ಯಾಬೊರೇಟರಿ ಟೆಕ್ನಿಷಿಯನ್- ಡಿಎಂಎಲ್ಟಿ, ಬಿ.ಎಸ್ಸಿ
ವಯೋಮಿತಿ : ಮೆಡಿಕಲ್ ಆಫೀಸರ್- 65 ವರ್ಷ
ಮಿಡ್ವೈಫ್/ನರ್ಸ್- 45 ವರ್ಷ
ಲ್ಯಾಬೊರೇಟರಿ ಟೆಕ್ನಿಷಿಯನ್- 40 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ : ಮೆಡಿಕಲ್ ಆಫೀಸರ್- ಮಾಸಿಕ ₹ 47,250
ಮಿಡ್ವೈಫ್/ನರ್ಸ್- ಮಾಸಿಕ ₹ 18,714
ಲ್ಯಾಬೊರೇಟರಿ ಟೆಕ್ನಿಷಿಯನ್- ಮಾಸಿಕ ₹ 18,465 ಉದ್ಯೋಗದ ಸ್ಥಳ: ಬೆಂಗಳೂರು
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಮುಖ್ಯ ವೈದ್ಯಾಧಿಕಾರಿ ಕಚೇರಿ (ಸಾರ್ವಜನಿಕ ಆರೋಗ್ಯ)
#304, ಅನೆಕ್ಸ್-3 ಕಟ್ಟಡ
3ನೇ ಮಹಡಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ
ಎನ್.ಆರ್.ಚೌಕ್
ಬೆಂಗಳೂರು-560002
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸಂಪರ್ಕಿಸಿ