ಚಿತ್ರದುರ್ಗ : ದೇಶಕ್ಕೆ ಕಾಂಗ್ರೆಸ್ ಪಕ್ಷವು ತುರ್ತು ಸಂದರ್ಭದಲ್ಲಿ ಮಾಧ್ಯಮದವರಿಗೆ ಅಪಮಾನ ಮಾಡಿ ಇಂದಿರ ಗಾಂಧಿಯವರು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತೆ ನಡೆದುಕೊಂಡಿದ್ದರು, ಆದರೆ ರಾಹುಲ್ ಗಾಂಧಿ ಅವರು ತುರ್ತು ಪರಿಸ್ಥಿತಿಯ ಐವತ್ತನೇ ವರ್ಷದ ಸಂಭ್ರಮಾಚರಣೆಯನ್ನು ಆಚರಿಸಲು ಮುಂದಾಗಿದ್ದಾರೆ ಇದರ ವಿರುದ್ಧ ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಪಕ್ಷದಿಂದ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
ಇಂದಿರಾ ಗಾಂಧಿ ಅಧಿಕಾರದಲ್ಲಿದ್ದಾಗ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ದೇಶದ ದಿಕ್ಕನ್ನು ತಪ್ಪಿಸಿದರು ಇದು ಅಲ್ಲದೆ ಸಂವಿಧಾನಕ್ಕೆ ಹಸಮಾನವು ಆಗಿದೆ ಇಂದ್ರಾ ಗಾಂಧಿಯವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅವರ ಮನಸ್ಸು ಇಚ್ಛೆಯಂತೆ ಅಧಿಕಾರ ಚಲಾಯಿಸಿ ಜನರನ್ನು ದಯನೀಯತೆ ಪರಿಸ್ಥಿತಿಗೆ ತಂದಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ಒನಕೆ ಓಬವ್ವ ವೃತ್ತದ ಆವರಣದಲ್ಲಿ ಕಾಂಗ್ರೆಸ್ ಕಚೇರಿಗೆ ಬಿಗಿ ಭದ್ರತೆಯನ್ನು ಒದಗಿಸಲಾಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿ ತಲುಪೋದಕ್ಕೆ ಬಿಡದೆ ಅಡ್ಡಗಟ್ಟಿ ಸುಮಾರು ಹದಿನೈದಕ್ಕಿಂತ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಜಿ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುರೇಶ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ ಶಂಭು, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಮಲ್ಲಿಕಾರ್ಜನ. ಅರುಣಕುಮಾರಿ, ಮಿನಾಕ್ಷಿ, ಮಂಜುಳಾ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.