ಚಿತ್ರದುರ್ಗ : ಪರಿಶಿಷ್ಟ ಜಾತಿ ಕಲ್ಯಾಣ ಇಲಾಖೆಯಲ್ಲಿ ಸರ್ಕಾರವು ನಿಗಮ ಅಧ್ಯಕ್ಷರನ್ನು ಆಯ್ಕೆ ಮಾಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗ ಜಿಲ್ಲೆಯ ಜಿಎಸ್ ಮಂಜುನಾಥ್ ಅವರನ್ನು ನಾಮನಿರ್ದೇಶನ ಮಾಡಿ ಸಮಾಜ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಎಂ ಸುಮಿತ್ರಾ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಏಳಿಗೆ ಹಾಗೂ ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ ಅವರ ಜಾತಿಯಲ್ಲಿ ಹಿಂದುಳಿದ ಕುಟುಂಬಗಳಿಗೆ ಸೌಲಭ್ಯತೆಯನ್ನು ಕೊಡಿಸುವ ಮೂಲಕ ಅವರ ಬಾಳಿನಲ್ಲಿ ಅಂಧಕಾರವನ್ನು ತೊಳೆದೆ ಹಾಕಿ ಸಮಾಜಮುಖಿ ಕೆಲಸ ಮಾಡುವ ಉದ್ದೇಶದಿಂದ ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಎಸ್ ಮಂಜುನಾಥ್ ಅವರು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಇದೀಗ ಇವರಿಗೆ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಅಧಕ್ಷರು ಸಹ ಆಗಿದ್ದಾರೆ.
ಕರ್ನಾಟಕ ಹಾದಿ ಜಂಬವ ಅಭಿವೃದ್ಧಿ ನಿಗಮ ಕಂಪನಿ ಆಕ್ಟ್ 2013ರ ಆರ್ಟಿಕಲ್ ಆಫ್ ಅಸೋಸಿಯೇಷನ್ ಆಫ್ ದಿ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಕಾಲಂ 29/1ರ ಅನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ.