ಬೆಳಗಾವಿ : NEET ಮತ್ತು UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪರೀಕ್ಷೆ ಮಾಡಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ NSUI ಪ್ರತಿಭಟನೆ ಮಾಡಿ ಮನವಿ ಮಾಡಲಾಯಿತು.
ಅನ್ಯಾಯ ಆಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ ಕೊಡುವಂತೆ ಸರ್ಕಾರಕ್ಕೆ ಮನವಿ ಮಾಡುವುದರ ಮೂಲಕ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನೆ ನಡೆಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟ ಆಡುವ ಅಧಿಕಾರಿಗಳ ವಿರುದ್ಧ ಮತ್ತೆ ಈ ತರಹದ ತಪ್ಪುಗಳು ರಾಜ್ಯದಲ್ಲಿ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎನ್ ಎಸ್ ಯು ಐ ನ ಅಧ್ಯಕ್ಷರು ಹಾಗೂ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರು ಮಹೇಶ್, ಯುವ ಕರ್ನಾಟಕ ಭೀಮ್ ಸೇನ್ ಅಧ್ಯಕ್ಷರು ಪ್ರವೀಣ್ ಮದರ್, ಮಲ್ಲಪ್ಪ ಅಕ್ಕ ಮಂಡಿ, ಅಕ್ಷಯ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದರು.