ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾದ ಪವಿತ್ರ ಗೌಡ ದರ್ಶನ್ ಸೇರಿದಂತೆ 13 ಮಂದಿ ಆರೋಪಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದರಲ್ಲೇ ಪವಿತ್ರ ಗೌಡ ಅವರು ಐಷಾರಾಮಿ ಜೀವನ ನಡೆಸುತ್ತಿದ್ದರು ಈಗ ಆ ರೀತಿ ಇರಲು ಈ ಜೈಲಿನಲ್ಲಿ ಸಾಧ್ಯವಾಗದ ಕಾರಣ ಅವರು ಪ್ರತಿದಿನ ನರಕ ಯಾತನೆ ಅನುಭವಿಸುತ್ತಿದ್ದಾರೆ. ಪವಿತ್ರ ಗೌಡ ಅವರಿಗೆ ಉಪ್ಪು ಕಾರ ಇಲ್ಲದ ಊಟವನ್ನು ಕೊಡುತ್ತಾರೆ ಮತ್ತು ಚಾಪೆಯಲ್ಲಿ ಮಲಗಲು ಸೊಳ್ಳೆ ಹೆಚ್ಚಾಗಿರುವ ಕಾರಣ ಅವರಿಗೆ ನಿದ್ದೆ ಇಲ್ಲದಂತೆ ಆಗಿದೆ. ಹೆಚ್ಚಾಗಿ ಸೊಳ್ಳೆ ಕಾಟ ಸಹ ಪವಿತ್ರಾ ಗೌಡ ಮತ್ತಷ್ಟು ಹೈರಾಣಾಗಿದ್ದಾರೆ. ರಾತ್ರಿ ಬೇಗ ಮಲಗಿದರೂ ಅವರು ಮತ್ತೆ ಎಚ್ಚರಗೊಳ್ಳುವಂತೆ.
ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಣ ಮಾಡಿಕೊಂಡು ಬಂದು, ಪಟ್ಟಣಗೆರೆ ಶೆಡ್‌ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹೊರಗೆ ಇದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದ ಅವರಿಗೆ ಜೈಲಿನಲ್ಲಿ ದಿನ ಕಳೆಯುವುದು ಕಷ್ಟವಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಸ್ಟಾರ್ ನಟ ದರ್ಶನ್ ಮೇಲೆ ಕೊಲೆ ಆರೋಪ ಬಂದ ಮೇಲೆ ಎಲ್ಲರ ಕಣ್ಣು ಈ ಕೇಸ್ ಮೇಲಿದೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಒತ್ತಾಯಿಸಿದ್ದಾರೆ. ದರ್ಶನ್ ಮೇಲೆ ಗಂಭೀರ ಆರೋಪದ ಕಾರಣ ಅವರ ಆಪ್ತರಿಗೆ ಬೇಸರವಾಗಿದೆ.
ಸಹಕೈದಿಗಳ ಜೊತೆ ಪವಿತ್ರಾ ಗೌಡ ಬೆರೆಯುತ್ತಿಲ್ಲ. ಅವರು ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಇಂದು (ಜೂನ್ 24) ಬೆಳಗ್ಗೆ ಬೇಗ ಎದ್ದ ಅವರು ಕಾಫಿ ಕುಡಿದು, ಪೇಪರ್ ಓದಿದ್ದಾರೆ. ನಿನ್ನೆ ರಾತ್ರಿ ಜೈಲಿನ ಸಿಬ್ಬಂದಿ ನೀಡಿದ್ದ ಮುದ್ದೆ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆ ಅನ್ನವನ್ನು ಅವರು ಒಲ್ಲದ ಮನಸ್ಸಿನಿಂದ ಸೇವಿಸಿದ್ದಾರೆ.