ಬೆಂಗಳೂರು : ನಟ ಪ್ರಥಮ್ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯನ್ನು ಬಂಧಿಸಿದ್ದಾರೆ. ಈತ ಇವರಿಬ್ಬರ ಮೇಲೆ ಹಲ್ಲೆ ನಡೆಸುವಂತೆ ತನ್ನ ವಿಡಿಯೋಗಳ ಮೂಲಕ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಚೇತನ್ ಎಂಬಾತನೇ ಬಂದಿತ ಆರೋಪಿ.
ಚಿತ್ತಕೊಯಮತ್ತೂರಿನಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ಸೂಚಿಸಲಾಗಿದೆ. ಬಸವೇಶ್ವರ ನಗರ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್‌ಐಆರ್ ದಾಖಲು ಮಾಡಲಾಗಿದೆ. ಈತ ನಿರ್ಮಾಪಕ ಉಮಾಪತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ.
ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದರು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ನಟ ಪ್ರಥಮ್‌ಗೆ ಕೂಡ ಈ ಬೆದರಿಕೆ ಹಾಕಿದ್ದಲ್ಲದೆ, ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡುವಂತೆ ಮಾತನಾಡಿದ್ದ. ಆರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್‌ಗೆ ಚೇತನ್ ಕ್ಷಮೆ ಕೇಳಿದ್ದಾನೆ.
ಕಾನೂನು ಬದ್ಧವಾಗಿ ನಡೆದುಕೊಳ್ಳಿನಿ ಕ್ಷಮಿಸಿ ಅಂತ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ. ಜೊತೆಗೆ ಮತ್ತೊಬ್ಬ ಅಭಿಮಾನಿ ನಾಗೇಶ್ ಎಂಬಾತನಿಗಾಗಿಯೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೆದರಿಕೆ ಹಾಕಿದ ಅಭಿಮಾನಿಗಳ ಮೇಲೆ ಪಿಸಿಆರ್ ದಾಖಲು ಮಾಡಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ಕೋರ್ಟ್ ಸೂಚನೆಯಂತೆ ಎಫ್‌ಐಆರ್ ದಾಖಲಾಗಿದೆ.