ಬೆಂಗಳೂರು : ಕರ್ನಾಟಕದಲ್ಲಿ ಇದೀಗ ಕಾಂಗ್ರೆಸ್ ಅಧಿಕಾರ ಇರುವುದರಿಂದ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿ ಕಾಣುತ್ತಿವೆ ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡಬೇಕೆಂದು ಹಲವು ಊಹಾಪೋಹಗಳು ನೀಡುತ್ತಾ ಬಂದಿವೆ.
ಇದಕ್ಕೆ ಸ್ವಸ್ತಿಕರಿಸಿದ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿಯ ಹುದ್ದೆ ಸೃಷ್ಟಿ ಬಗ್ಗೆ ಯಾರು ಬಹಿರಂಗ ಹೇಳಿಕೆಗಳನ್ನು ನೀಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರಿಗೆ ಹಾಗೂ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿಕೆ ನೀಡಲು ಆರಂಭಿಸಿದ ಸಚಿವ ಕೆ ಎನ್ ರಾಜಣ್ಣ ಜೊತೆ ಸಿದ್ದರಾಮಯ್ಯ ದೂರವಾಣಿ ಸಂಪರ್ಕ ಮೂಲಕ ಮತಕತೆ ನಡೆಸಿ ಎಚ್ಚರಿಕೆ ನೀಡಿದ್ದೇನೆ ಬಹಿರಂಗ ಹೇಳಿಕೆಗಳಿಂದ ಸರ್ಕಾರ ಹಾಗೂ ಪಕ್ಷದ ಮೇಲೆ ತುಂಬಾ ದುಷ್ಪರಿಣಾಮ ಬೀರುತ್ತದೆ ಎಂದು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಸಿದ್ದರಾಮಯ್ಯನವರು ಎಚ್ಚರಿಕೆ ನೀಡಿದ್ದಾರೆ.
ಡಿಸಿಎಂ ಹುದ್ದೆಯ ಸೃಷ್ಟಿ ಬಗ್ಗೆ ಸಚಿವರ ಹೇಳಿಕೆಗಳ ತೀರ್ವ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿಕೆ ಶಿವಕುಮಾರ್ ಯಾರು ಏನು ಬೇಕಾದರೂ ಹೇಳಲಿ ಬಹಿರಂಗವಾಗಿ ಚರ್ಚಿಸಲಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಇದೆ ಅವರು ಏನು ತೀರ್ಮಾನ ಕೈಗೋಳ್ಳುತ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಬಹಳ ಸಂತೋಷ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿದ್ದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಕಾಂಗ್ರೆಸ್ ಪಕ್ಷದ ಪದ್ಧತಿ ಹೆಚ್ಚುವರಿ ಡಿಸಿಎಂ ಆಯ್ಕೆ ಮಾಡುವುದೇ ಆದರೆ ಡಿಕೆ ಶಿವಕುಮಾರ್ಅನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಆಮೇಲೆ 10 ಡಿಸಿಎಂ ಬೇಕಾದರೂ ಮಾಡಿಕೊಳ್ಳಿ ಎಂದು ಶಾಸಕ ಬಸವರಾಜ್ ಶಿವಗಂಗಾ ಹೇಳಿದರು.